ಕಲ್ಪ ಮೀಡಿಯಾ ಹೌಸ್
ನವದೆಹಲಿ: ಕೊರೋನಾ ಸೋಂಕು ನಿಯಂತ್ರಿಸುವ ವಿಚಾರದಲ್ಲಿ ಅಗತ್ಯ ಅನುಸಾರ ತೀರ್ಮಾನ ತೆಗೆದುಕೊಂಡು ಲಾಕ್‌ಡೌನ್ ಘೋಷಣೆಯ ನಿರ್ಧಾರವನ್ನು ತೆಗೆದುಕೊಳ್ಳಲು ಆಯಾ ಜಿಲ್ಲಾಧಿಕಾರಿಗಳು ಸ್ವತಂತ್ರರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಆಯಾ ಜಿಲ್ಲೆಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಸೋಂಕು ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳೇ ಲಾಕ್‌ಡೌನ್ ಘೋಷಿಸಬಹುದು. ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹರಡದಂತೆ ತಡೆಗಟ್ಟುವುದು ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಅಗತ್ಯ ಅನುಸಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕೃಷಿ ಸಂಬಂಧಿತ ಚಟುವಟಿಕೆಗಳ ಮೇಲೆ ಯಾವುದೇ ನಿರ್ಬಂಧ ವಿಧಿಸಬಾರದು ಎಂದು ಪ್ರಧಾನಿಯವರು ಸೂಚಿಸಿದ್ದಾರೆ. ದೇಶದ ಹಲವೆಡೆ ಸೋಂಕು ಕಡಿಮೆಯಾಗುತ್ತಿರುವ ವಿಚಾರದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯ ಶ್ಲಾಘನೀಯವಾದುದು ಎಂದು ಪ್ರಧಾನಿಯವರು ಪ್ರಶಂಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post