ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಪೆರೇಡ್ ಮಾಡಿದ ಹಾಗೂ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌನ ಮುರಿದು ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು, ನನ್ನ ಹೃದಯ ಸಿಟ್ಟಿನಿಂದ ಕುದಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಸತ್ ಭವನದ ಆವರಣದಲ್ಲಿ ಮಾತನಾಡಿದ ಅವರು, ಮಣಿಪುರ ಘಟನೆ 140 ಕೋಟಿ ಭಾರತೀಯರಿಗೆ ಮಾಡಿದ ಅವಮಾನ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ವಿಷಯ ಕೇಳಿ ನನ್ನ ಹೃದಯ ತುಂಬಾ ನೋವಾಗಿದ್ದು ಸಿಟ್ಟಿನಿಂದ ಕುದಿಯುತ್ತಿದೆ. ನಮ್ಮ ಮುಂದೆ ಬಂದಿರುವ ಮಣಿಪುರದ ಘಟನೆ ಯಾವುದೇ ಸುಸಂಸ್ಕೃತ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ. ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ.
Also read: ಐವರು ಶಂಕಿತ ಉಗ್ರರ ಬಂಧನ ಬೆನ್ನಲ್ಲೇ ದಾವಣಗೆರೆಯಲ್ಲಿ ವ್ಯಕ್ತಿಯ ಬಂಧನ?
ಈ ಪ್ರಕರಣದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದ್ದು ತಪ್ಪಿತಸ್ಥರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ, ಕಠಿಣ ಶಿಕ್ಷೆಯಾಗಲಿದೆ ಎಂದಿದ್ದಾರೆ.
ಅದು ರಾಜಸ್ಥಾನ ಅಥವಾ ಮಣಿಪುರದ ಛತ್ತೀಸ್’ಘಡದಲ್ಲಿ ಅಥವಾ ದೇಶದ ಯಾವುದೇ ಮೂಲೆಯಲ್ಲಿ ಯಾವುದೇ ಘಟನೆಯಾಗಿರಲಿ, ರಾಜಕೀಯದಿಂದ ಹೊರಬಂದು ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post