ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಥುರಾ ಶ್ರೀಕೃಷ್ಣ ಜನ್ಮಸ್ಥಳಕ್ಕೆ Mathura Shrikrishna Birth Place ಸಂಬಂಧಿಸಿದಂತೆ ಇದಕ್ಕೆ ಹೊಂದಿಕೊಂಡಂತಿರುವ ಶಾಹಿ ಈದ್ಗಾ ಮಸೀದಿ ಸರ್ವೇಗೆ ಸುಪ್ರೀಂ ಕೋರ್ಟ್ Supreme Court ತಡೆ ನೀಡಿದೆ.
ಈ ಕುರಿತಂತೆ ಇಂದು ತಡೆ ಆದೇಶ ಹೊರಡಿಸಿರುವ ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೂ ಸರ್ವೇ ನಡೆಸದಂತೆ ಸೂಚಿಸಿದೆ.
ಶ್ರೀಕೃಷ್ಣ ಜನ್ಮ ಸ್ಥಳ ಹಾಗೂ ಇದಕ್ಕೆ ಹೊಂದಿಕೊಂಡಂತೆ ಇರುವ ಶಾಹಿ ಈದ್ಗಾ ಮಸೀದಿ Shahi Edga ವಿವಾದ ಕೋರ್ಟ್ ಮೆಟ್ಟಿಲೇರಿತ್ತು. ಹಾಗೂ ವಾರಣಾಸಿಯ ಜ್ಞಾನವ್ಯಾಪಿ ಮಸೀದಿಯಲ್ಲಿ ನಡೆಸಿದ ಸಮೀಕ್ಷೆಯಂತೆ ಮಥುರಾದಲ್ಲಿಯೂ ಸಹ ಸಮೀಕ್ಷೆ ನಡೆಸಬೇಕು ಎಂದು ಮನವಿ ಮಾಡಲಾಗಿತ್ತು. ಹಿಂದೂ ಪರ ಸಂಘಟನೆಗಳ ಮನವಿಯಂತೆ ಮಸೀದಿಯ ಸರ್ವೇ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿತ್ತು. ಇದಕ್ಕಾಗಿ ಅಡ್ವೋಕೇಟ್ ಕಮಿಷನರ್ ಸಹ ನಿಯೋಜಿಸಿತ್ತು.
ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಶಾಹಿ ಈದ್ಗಾ ಕಮಿಟಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಸರ್ವೇಗೆ ತಾತ್ಕಾಲಿಕ ತಡೆ ನೀಡಲಾಗಿದ್ದು, ಹಿಂದೂಪರ ಸಂಘಟನೆಗಳಿಗೆ ನೋಟಿಸ್ ಸಹ ಜಾರಿ ಮಾಡಿದೆ.
ಸಮೀಕ್ಷೆ ಮನವಿ ಕುರಿತಂತೆ ವಿಚಾರ ಅಸ್ಪಷ್ಟವಾಗಿದ್ದು, ಇದರಲ್ಲಿ ಹೆಚ್ಚಿನ ಪರಿಶೀಲನೆ ಅಗತ್ಯವಿದೆ. ಹೀಗಾಗಿ ಈ ಪ್ರಕರಣದ ವಿಚಾರಣೆಯನ್ನು ಜ.23ರಂದು ನಡೆಸಲಾಗುತ್ತದೆ ಎಂದು ನ್ಯಾಯಪೀಠ ಹೇಳಿದೆ. ಸುಪ್ರೀಂ ಕೋರ್ಟ್‌ನ ಈ ನಡೆಯಿಂದಾಗಿ ಹಿಂದೂ ಸಂಘಟನೆಗಳಿಗೆ ದೊಡ್ಡ ಹಿನ್ನಡೆಯಾಗಿದೆ.
ಕೃಷ್ಣನ ಜನ್ಮಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹಿಂದೂ ಸಂಘಟನೆಗಳು ಹೇಳಿಕೊಂಡಿವೆ ಮತ್ತು ಸಮೀಕ್ಷೆಗೆ ಒತ್ತಾಯಿಸಿವೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಸ್ಥಳೀಯ ನ್ಯಾಯಾಲಯ ಈ ಬೇಡಿಕೆಯನ್ನು ಅಂಗೀಕರಿಸಿತ್ತು ಆದರೆ ಮುಸ್ಲಿಂ ಕಡೆಯವರು ಹೈಕೋರ್ಟ್‌ನಲ್ಲಿ ಆಕ್ಷೇಪಣೆ ಸಲ್ಲಿಸಿದ್ದರು.
ವಿವಾದಿತ 13.37 ಎಕರೆ ಜಮೀನಿನ ಸಂಪೂರ್ಣ ಮಾಲೀಕತ್ವಕ್ಕೆ ಆಗ್ರಹಿಸಿ ಹಿಂದೂ ಕಡೆಯವರು ಮಥುರಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಶತಮಾನಗಳಷ್ಟು ಹಳೆಯದಾದ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನವನ್ನು ಕೆಡವಿ ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿದ್ದರು. ಇದು ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶವಾಗಿದೆ ಎಂದು ಅವರು ಆರೋಪಿಸಿದರು.
ಅರ್ಜಿದಾರರು ಪುರಾವೆಯಾಗಿ, ಮಸೀದಿಯ ಕೆಲವು ಗೋಡೆಗಳ ಮೇಲೆ ಕಮಲದ ಕೆತ್ತನೆಗಳ ಅಸ್ತಿತ್ವವನ್ನು ಪ್ರತಿಪಾದಿಸುತ್ತಾರೆ, ಹಾಗೆಯೇ ಹಿಂದೂ ಪುರಾಣಗಳಲ್ಲಿ ಹಾವಿನ ದೇವತೆಯಾದ ‘ಶೇಷನಾಗ್’ ಅನ್ನು ಹೋಲುವ ಆಕಾರಗಳು. ಇದು ದೇವಾಲಯದ ಮೇಲೆ ಮಸೀದಿಯನ್ನು ನಿರ್ಮಿಸಿರುವುದನ್ನು ತೋರಿಸುತ್ತದೆ ಎಂದು ಅವರು ವಾದಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post