ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಹತ್ವದ ಬೆಳವಣಿಗೆಯೊಂದರಲ್ಲಿ ಮಿಜೋರಾಂ ವಿಧಾನಸಭಾ ಚುನಾವಣೆಯ Mizoram Assembly Election ಮತ ಎಣಿಕೆಯನ್ನು ಡಿ.4ರ ಸೋಮವಾರಕ್ಕೆ ಮುಂದೂಡಲಾಗಿದೆ.
ಈ ಹಿಂದೆ ನಿಗದಿಯಾದಂತೆ ಡಿ.3ರಂದು ಮತ ಎಣಿಕೆಗೆ ಆಯೋಗ ನಿರ್ಧಾರವಾಗಿತ್ತು. ಆದರೆ, ವಿಶೇಷ ಮನವಿಯೊಂದಿಗೆ ಈ ನಿರ್ಧಾರಕ್ಕೆ ಚುನಾವಣಾ ಆಯೋಗ ಬಂದಿದೆ.
ಕ್ರಿಶ್ಚಿಯನ್ ಬಹುಸಂಖ್ಯಾತ ಮಿಜೋರಾಂ ರಾಜ್ಯದಲ್ಲಿ ಭಾನುವಾರ ಅಲ್ಲಿನ ಜನರಿಗೆ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಹೀಗಾಗಿ, ಮತ ಎಣಿಕೆಯನ್ನು ಮುಂದೂಡಬೇಕು ಎಂದು ಅಲ್ಲಿನ ಜನರು ಹಾಗೂ ಸಂಘ ಸಂಸ್ಥೆಗಳು ಮನವಿ ಮಾಡಿದವು. ಈ ಹಿನ್ನೆಲೆಯಲ್ಲಿ ಆಯೋಗ ಈ ನಿರ್ಧಾರಕ್ಕೆ ಬಂದಿದೆ.
Also read: ಸೋಮವಾರದಿಂದ ಸಂಸತ್ ಚಳಿಗಾಲದ ಅಧಿವೇಶನ | ಹಲವು ಮಸೂದೆಗಳ ಅಂಗೀಕಾರ?
ಕಳೆದ ತಿಂಗಳು ವಿಧಾನಸಭಾ ಚುನಾವಣೆ ನಡೆದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್’ಗಢ ಮತ್ತು ತೆಲಂಗಾಣ ರಾಜ್ಯಗಳ ಮತ ಎಣಿಕೆ ನಾಳೆ ಭಾನುವಾರ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post