ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಷ್ಟ್ರಪತಿ ದ್ರೌಪದಿ ಮುರ್ಮು President Droupadi Murmu ಅವರು, ಇನ್ಫೋಸಿಸ್ ಸಂಸ್ಥಾಪಕಿ, ಲೇಖಕಿ ಸುಧಾ ಮೂರ್ತಿ Sudha Murthy ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.
I am delighted that the President of India has nominated @SmtSudhaMurty Ji to the Rajya Sabha. Sudha Ji’s contributions to diverse fields including social work, philanthropy and education have been immense and inspiring. Her presence in the Rajya Sabha is a powerful testament to… pic.twitter.com/lL2b0nVZ8F
— Narendra Modi (@narendramodi) March 8, 2024
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಸುಧಾಮೂರ್ತಿ ಅವರಿಗೆ ಶುಭ ಹಾರೈಸಿದ್ದಾರೆ.
Also read: ಆರ್ಮಿ ಕಪ್ 2024: ಮಾ.9ರಂದು ತಾಲೂಕು ಮಟ್ಟದ ಹಗ್ಗ ಜಗ್ಗಾಟ ಪಂದ್ಯಾವಳಿ
ರಾಷ್ಟ್ರಪತಿಗಳು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ Naari Shakti ಪ್ರಬಲವಾದ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರಿಗೆ ಫಲಪ್ರದ ಸಂಸದೀಯ ಅಧಿಕಾರಾವಧಿಯನ್ನು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post