ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ತಾವು ಪ್ರಧಾನಿಯಾದ ನಂತರ ಇಡಿಯ ವಿಶ್ವವೇ ತಮ್ಮತ್ತ ತಿರುಗಿ ನೋಡುವಂತೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ಈಗ ಮತ್ತೆ ಶ್ರೇಷ್ಠ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.
ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ವರದಿಯನ್ನು ಬಿಡುಗಡೆ ಮಾಡಿದ್ದು, ವಿಶ್ವದ ಸಮೀಕ್ಷೆಯ ಪಟ್ಟಿಯಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಗ್ರಸ್ಥಾನದಲ್ಲಿದ್ದಾರೆ.
ವಿಶ್ವದ ಸಮೀಕ್ಷೆಯ ಜಾಗತಿಕ ಪಟ್ಟಿಯಲ್ಲಿ ವಿಶ್ವದ 13 ನಾಯಕರು ಸ್ಥಾನ ಪಡೆದಿದ್ದು, ಶೇ.71 ರೇಟಿಂಗ್ ಪಡೆದಿರುವ ಭಾರತದ ಪ್ರಧಾನಿ ಮೋದಿಯವರು ವಿಶ್ವದ ಜನಪ್ರಿಯ ನಾಯಕರ ಪಟ್ಟಿಯ ಮೊದಲನೆಯ ಸ್ಥಾನದಲ್ಲಿದ್ದಾರೆ.
ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಶೇ.43 ರೇಟಿಂಗ್ ಪಡೆದುಕೊಂಡು 6ನೇ ಸ್ಥಾನದಲ್ಲಿದ್ದಾರೆ. ಕೆನಡಾದ ಅಧ್ಯಕ್ಷ ಜಸ್ಟಿನ್ ಟ್ರು ಡೋ ಕೂಡ ಶೇ.43 ರೇಟಿಂಗ್ ಪಡೆದು ಅಮೇರಿಕಾದ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಸರಿ ಸಮಾನವಾದ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಶೇ.41 ರೇಟಿಂಗ್ ಪಡೆದುಕೊಂಡಿದ್ದಾರೆ.
2021ರಲ್ಲೂ ಬಿಡುಗಡೆಯಾದ ವಿಶ್ವದ ಪಟ್ಟಿಯಲ್ಲಿ ಪ್ರಧಾನಿ ಮೋದಿಯವರು ಮೊದಲನೆಯ ಸ್ಥಾನದಲ್ಲಿಯೇ ಇದ್ದಿದ್ದರು. ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೋ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್ ನಾಯಕರು ವಿವಿಧ ರ್ಯಾಂಕ್ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post