ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದಲ್ಲಿ ಪ್ರತಿದಿನ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1,68,063 ಪ್ರಕರಣ ಪತ್ತೆಯಾಗಿದೆ.
ಒಟ್ಟು ಸೋಂಕಿತರ ಸಂಖ್ಯೆ 3,58,75,790ಕ್ಕೆ ಏರಿಕೆಯಾಗಿದ್ದು, 69,959 ಸೋಂಕಿತರು ಗುಣಮಮುಖರಾಗಿದ್ದಾರೆ. 277 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೈನಂದಿನ ಪಾಸಿಟಿವಿಟಿ ದರ ಶೇ. 10. 64 ರಷ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,21,446ಕ್ಕೆ ಏರಿಕೆಯಾಗಿದೆ. ಜನವರಿ 10 ರಂದು ಒಟ್ಟು 15,79,928 ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 69,31,55,280 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಹೇಳಲಾಗಿದೆ.
ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 4,461ಕ್ಕೆ ಏರಿಕೆಯಾಗಿದೆ. ಇದರಲ್ಲಿ ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post