ಕಲ್ಪ ಮೀಡಿಯಾ ಹೌಸ್
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ, ನ್ಯಾಯಮೂರ್ತಿಗಳ ನೇಮಕಕ್ಕಾಗಿ ಒಟ್ಟು ಒಂಬತ್ತು ಜನರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದ್ದು, ಇದರಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿರುವ ಬಿ.ವಿ. ನಾಗರತ್ನ ಅವರೂ ಇದ್ದಾರೆ ಎನ್ನಲಾಗಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಸುಪ್ರೀಂಕೋರ್ಟ್‌ನ ಇತಿಹಾಸದಲ್ಲಿಯೇ ಈವರೆಗೂ ಯಾವುದೇ ಮಹಿಳಾ ನ್ಯಾಯಮೂರ್ತಿ ಈ ಅತ್ಯುನ್ನತ ಹುದ್ದೆಗೆ ಏರಿರಲಿಲ್ಲ. ಈ ದಾಖಲೆ ಕರ್ನಾಟಕದಿಂದ ಸೃಷ್ಟಿಯಾಗುತ್ತಿರುವುದು ವಿಶೇಷವಾಗಿದೆ. ಹಾಗೂ ಇದರೊಂದಿಗೆ ಭಾರತದ ಸುಪ್ರೀಂ ಕೋರ್ಟ್ 2027ರಲ್ಲಿ ಮೊದಲ ಬಾರಿಗೆ ಮಹಿಳಾ ಮುಖ್ಯ ನ್ಯಾಯಮೂರ್ತಿಯನ್ನು ಕಾಣಲಿದೆ. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಭಾರತದ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಏರುವ ಸಾಧ್ಯತೆ ಇದೆ ಎಂಬ ಆಶಯ ವ್ಯಕ್ತವಾಗುತ್ತಿದೆ.
ಆದರೆ ಇದು ಕೇಂದ್ರ ಸರ್ಕಾರದ ತೀರ್ಮಾನವನ್ನು ಅವಲಂಬಿಸಿದ್ದು, ಹಾಲಿ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂಕೋರ್ಟ್ ಕೊಲಿಜಿಯಂ, ಒಂಬತ್ತು ಹೈಕೋರ್ಟ್ ನ್ಯಾಯಮೂರ್ತಿಗಳ ಪದೋನ್ನತಿಗೆ ಶಿಫಾರಸು ಮಾಡಿದೆ. ನ್ಯಾಯಮೂರ್ತಿಗಳಾದ ಹಿಮಾ ಕೋಹಿ ಮತ್ತು ಬೆಲಾ ತ್ರಿವೇದಿ ಶಿಫಾರಸು ಮಾಡಲಾದ ಪಟ್ಟಿಯಲ್ಲಿ ಇರುವ ಇತರೆ ಇಬ್ಬರು ಮಹಿಳೆಯರಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post