ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಭಾರೀ ಕುತೂಹಲ ಕೆರಳಿಸಿದ್ದ ಹಿಜಾಬ್ Hijab ಬ್ಯಾನ್ ಪ್ರಕರಣದಲ್ಲಿ ಇಬ್ಬರು ನ್ಯಾಯಾಧೀಶರು ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಇದರ ವಿಚಾರಣೆ ಮುಖ್ಯನ್ಯಾಯಮೂರ್ತಿಗಳುಳ್ಳ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಲಿದೆ.
ಹಿಜಾಬ್ ಕುರಿತಾಗಿ ಅಂತಿಮ ತೀರ್ಪು ಇಂದು ಪ್ರಕಟಗೊಳ್ಳಬೇಕಿತ್ತು. ಆದರೆ, ಇಬ್ಬರು ನ್ಯಾಯಾಧೀಶರು ವಿಭಿನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ತರಗತಿಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್ High Court ತೀರ್ಪಿಗೆ ಸಹಮತ ವ್ಯಕ್ತಪಡಿಸಿರುವ ನ್ಯಾ.ಹೇಮಂತ್ ಗುಪ್ತಾ, ಮುಸ್ಲಿಂ ವಿದ್ಯಾರ್ಥಿನಿಯರ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿಯುತ್ತೇನೆ ಎಂದಿರುವ ನ್ಯಾಯಮೂರ್ತಿಗಳು, ಅರ್ಜಿದಾರರ ಎಲ್ಲ ಅರ್ಜಿಗಳನ್ನು ವಜಾಗೊಳಿಸುತ್ತಿದ್ದಾನೆ. ಅರ್ಜಿದಾರರ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ ಎಂದಿದ್ದಾರೆ.
ಆದರೆ, ಇದಕ್ಕೆ ವಿಭಿನ್ನವಾಗಿ ಅಭಿಪ್ರಾಯ ವ್ಯಕ್ತಪಡಿಸಿರುವ ಇನ್ನೊಬ್ಬ ನ್ಯಾ. ಸುದಾಂಶು ಧುಲಿಯಾ ಅವರು, ಹಿಜಾಬ್ ಧರಿಸುವುದು ವಿವಾದವಾಗುವ ಧಾರ್ಮಿಕ ಆಚರಣೆಯಲ್ಲ. ಈ ಕುರಿತಂತೆ ತಪ್ಪಾಗಿ ಅರ್ಥೈಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸುತ್ತಿದ್ದೇನೆ ಎಂದಿದ್ದಾರೆ.
Also read: ಕ್ಲೇಂ ನಿರಾಕರಿಸಿದ್ದಕ್ಕೆ ದಂಡ ಸೇರಿ 1,31,216 ರೂ. ಪಾವತಿಸಲು ಎಲ್’ಐಸಿಗೆ ಗ್ರಾಹಕ ಆಯೋಗ ಸೂಚನೆ
ಹಿಜಾಬ್ ಅರ್ಜಿದಾರರ ಆಕ್ಷೇಪಣೆಗಳನ್ನು ನಾನು ಎತ್ತಿಹಿಡಿಯತ್ತಿದ್ದೇನೆ ಎಂದಿರುವ ಅವರು, ಈಗ ನನ್ನ ಮನಸ್ಸಿನಲ್ಲಿ ಓಡುತ್ತಿರುವ ವಿಚಾರ `ನಾವು ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತಮವಾಗಿಸುತ್ತಿದ್ದೇವೆಯೇ’ ಎಂಬುದಾಗಿದೆ. ಧಾರ್ಮಿಕ ವಿವಾದವನ್ನು ತಪ್ಪಾಗಿ ಅರ್ಥೈಸಿಕೊಂಡಿರುವ ಹೈಕೋರ್ಟ್ ತೀರ್ಪನ್ನು ವಜಾಗೊಳಿಸುತ್ತಿದ್ದೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post