ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮುಂದಿನ ವಾರ ಸಂಸತ್ ವಿಶೇಷ ಅಧಿವೇಶನ Parliament Special Session ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ತನ್ನ ಸಂಸದರಿಗೆ ವಿಪ್ ಜಾರಿ ಮಾಡಿದೆ.
ಸೆ.18ರಿಂದ 22ರವರೆಗೂ ಸಂಸತ್ ವಿಶೇಷ ಅಧಿವೇಶನ ನಡೆಯಲಿದ್ದು, ಬಿಜೆಪಿ ತನ್ನ ಲೋಕಸಭಾ ಸಂಸದರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿದ್ದು, ಪ್ರತಿಯೊಬ್ಬರೂ ಸರ್ಕಾರದ ಪರವಾಗಿ ನಿಲ್ಲಬೇಕು ಎಂದು ಸೂಚನೆ ನೀಡಿದೆ.
ಈ ವಿಶೇಷ ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರಗಳ ಪ್ರಮುಖ ವಿಚಾರಗಳನ್ನು ಚರ್ಚೆಗೆ ತೆಗೆದುಕೊಳ್ಳಲಾಗುತ್ತದೆ. ಹೀಗಾಗಿ, ಪಕ್ಷದ ಎಲ್ಲ ಸಂಸದರು ತಪ್ಪದೇ ಹಾಜರಿದ್ದು, ಸರ್ಕಾರದ ನಿಲುವನ್ನು ಬೆಂಬಲಿಸಬೇಕು ಎಂದು ತಿಳಿಸಲಾಗಿದೆ.
Also read: ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ
ವಿಶೇಷ ಅಧಿವೇಶನದ ಘೋಷಣೆಯ ನಂತರ ಅಜೆಂಡಾವನ್ನು ಮುಚ್ಚಿಟ್ಟ ನಂತರ, ಸರ್ಕಾರವು ಬುಧವಾರದಂದು ಸಂಸತ್ತಿನ 75 ವರ್ಷಗಳ ಪ್ರಯಾಣದ ಬಗ್ಗೆ ವಿಶೇಷ ಚರ್ಚೆಯನ್ನು ಆರಂಭಿಕ ದಿನದಂದು ಪಟ್ಟಿ ಮಾಡಿದೆ ಎಂದು ಹೇಳಿದೆ. ಸೆ. 19 ರಂದು ಸಂಸತ್ತಿನ ಕಲಾಪಗಳು ಹೊಸ ಸಂಸತ್ತಿನ ಕಟ್ಟಡದಲ್ಲಿ ನಡೆಯುವ ಸಾಧ್ಯತೆಯಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post