ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಡಿಸೆಂಬರ್ 22ರ ಸೋಮವಾರದಿಂದ ಸಂಸತ್ ಚಳಿಗಾಲದ ಅಧಿವೇಶನ Parliament Winter Session ಆರಂಭವಾಗಲಿದ್ದು, ಬಾಕಿಯಿರುವ ಹಲವು ಮಸೂದೆಗಳನ್ನು ಸರ್ಕಾರ ಅಂಗೀಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಸದ್ಯ, 37 ಮಸೂದೆಗಳು ಸಂಸತ್ತಿನಲ್ಲಿ ಬಾಕಿ ಉಳಿದಿದ್ದು, ಅವುಗಳಲ್ಲಿ 12 ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಮತ್ತು ಏಳು ಮಸೂದೆಗಳು ಪರಿಚಯ, ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ.

Also read: ಭ್ರೂಣ ಲಿಂಗ ಹತ್ಯೆ ಜಾಲ ತನಿಖೆ ಚುರುಕು | ಆಯುಷ್ ಇಲಾಖೆ ವೈದ್ಯ ಸತೀಶ್ ನಿಗೂಢ ಸಾವು
ಪಂಚರಾಜ್ಯಗಳ ಚುನಾವಣಾ ಫಲಿತಾಂಶವನ್ನು ಲೋಕಸಭೆ ಚುನಾವಣೆಯ ಸೆಮಿ ಫೈನಲ್ ಎಂದೇ ಕರೆಯಲಾಗುತ್ತಿದ್ದು, ಇದರ ಬೆನ್ನಲ್ಲೇ ಅಧಿವೇಶನ ಆರಂಭವಾಗುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಯಲಿದೆ. ಕೇಂದ್ರ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ Minister Prahlad Joshi ಸಭೆ ನಡೆಸಲಿದ್ದಾರೆ.










Discussion about this post