ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಇಂದು ಬೆಳಗ್ಗೆ 9.49ರ ಸುಮಾರಿನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಬಲ ಭೂಕಂಪದ ಅನುಭವವಾಗಿದ್ದು, ಪಾಕಿಸ್ತಾನದಲ್ಲೂ 7.3 ತೀವ್ರತೆಯ ಭೂಕಂಪ ಆಗಿರುವ ಬಗ್ಗೆ ತಿಳಿದು ಬಂದಿದೆ.
ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಪಾಕಿಸ್ತಾನದ ಇಸ್ಲಾಮಾಬಾದ್‌ನಿಂದ ಸುಮಾರು 189 ಕಿ.ಮೀ. ದೂರದಲ್ಲಿದ್ದು, ಈ ಸ್ಥಳವು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಗಡಿಯಲ್ಲಿರುವ ಹಿಂದೂಕುಶ್ ಬೆಟ್ಟಗಳ ಸಮೀಪದಲ್ಲಿದೆ.
181 ಕಿಮೀ ಆಳದಲ್ಲಿ 36.34 ಡಿಗ್ರಿ ಉತ್ತರ ಮತ್ತು ರೇಖಾಂಶ 71.05 ಡಿಗ್ರಿ ಪೂರ್ವದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post