ಕಲ್ಪ ಮೀಡಿಯಾ ಹೌಸ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎರಡನೆಯ ಡೋಸ್ ಕೊರೋನಾ ಲಸಿಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಪಡೆದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರಿ, ನಾನು ಕೋವಿಡ್ ಲಸಿಕೆಯ ಎರಡನೇ ಡೋಸ್ ಅನ್ನು ಏಮ್ಸ್ ಆಸ್ಪತ್ರೆಯಲ್ಲಿ ಪಡೆದಿದ್ದೇನೆ. ಕೊರೋನಾ ಮಹಾಮಾರಿ ವಿರುದ್ಧ ಹೋರಾಡಲು ಕೆಲವು ವಿಧಾನಗಳಲ್ಲಿ ಲಸಿಕೆ ಕೂಡ ಒಂದು. ಅರ್ಹರು ಲಸಿಕೆಯನ್ನು ಪಡೆಯಿರಿ ಎಂದು ಮನವಿ ಮಾಡಿದ್ದಾರೆ.
ಮಾರ್ಚ್ 1ರಂದು ಪ್ರಧಾನಿ ಮೋದಿ ಅವರು ಮೊದಲನೇ ಡೋಸ್ ಲಸಿಕೆ ಪಡೆದುಕೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















