ಕಲ್ಪ ಮೀಡಿಯಾ ಹೌಸ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡನೆಯ ಅವಧಿಗೆ ಕೇಂದ್ರ ಸಂಪುಟ ಪುನರ್ ರಚನೆ ಮಾಡಿದ್ದು, 11 ಸಚಿವರನ್ನು ಸಂಪುಟದಿಂದ ಕೈಬಿಟ್ಟು, ಹೊಸದಾಗಿ 43 ಜನ ನೂತನ ಸದಸ್ಯರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಇಂದು ಸಂಜೆ ನಡೆದ ಈ ಕಾರ್ಯಕ್ರಮದಲ್ಲಿ ರಾಜ್ಯದ ಎ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಭಗವಂತ್ ಖೂಬಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಡಿ.ವಿ.ಸದಾನಂದ ಗೌಡ, ಡಾ. ಹರ್ಷವರ್ಧನ್, ರಾವು ಸಾಹೇಬ್ ದಾನ್ವೆ ಪಾಟೀಲ್, ಬಾಬುಲ್ ಸುಪ್ರಿಯೋ, ಪ್ರತಾಪ್ ಸಾರಂಗಿ, ರಮೇಶ್ ಪೋಖ್ರಿಯಾಲ್, ದೇಬಾಶ್ರೀ ಚೌಧುರಿ, ಸಂತೋಷ್ ಗಂಗ್ವಾರ್, ಥಾವರ್ ಚಂದ್ ಗೆಹ್ಲೋಟ್, ಸಂಜಯ್ ಶಮರಾವ್ ಧೋತ್ರೆ ಮತ್ತು ರತ್ತನ್ ಲಾಲ್ ಕಟಾರಿಯಾ ಸೇರಿದಂತೆ 11 ಮಂದಿಯನ್ನು ಸಂಪುಟದಿಂದ ಕೈಬಿಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















