ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಏಕರೂಪ ನೀತಿ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿಯು ಕರಡನ್ನು ಸಿದ್ಧಪಡಿಸಿದ್ದು ಸದ್ಯದಲ್ಲಿಯೇ ಉತ್ತರಖಂಡ ರಾಜ್ಯದಲ್ಲಿ ಈ ಯೋಜನೆ ಜಾರಿಯಾಗುವ ನಿರೀಕ್ಷೆಯಿದೆ.
ವರ್ಷದ ಹಿಂದೆಯೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ರಚಿಸಿದ್ದ ತಜ್ಞರ ಸಮಿತಿಯು ಈಗಾಗಲೇ ಏಕರೂಪ ನೀತಿ ಸಂಹಿತೆ ಜಾರಿಗೆ ಸಂಬಂಧಿಸಿದ ವರದಿಯನ್ನು ಸಿದ್ದಪಡಿಸಿದ್ದು, ಸದ್ಯದಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಲಿದ್ದು, ಬಳಿಕ ಸದನದಲ್ಲಿ ಮಂಡಿಸಲಾಗುವುದು ಎನ್ನಲಾಗಿದೆ.

ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಯಾರಿ ನಡೆಸುತ್ತಿರುವ ನಡುವೆಯೇ ಬಿಜೆಪಿ ಆಡಳಿತದಲ್ಲಿರುವ ಉತ್ತರಾಖಂಡ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಸಂಹಿತೆಗೆ ಸಂಬಂಧಿಸಿ ಸಿದ್ದವಾಗಿರುವ ಕರಡು ಪ್ರತಿ ವರದಿಯೇ ಕೇಂದ್ರ ಸರ್ಕಾರಕ್ಕೂ ಮಾದರಿಯಾಗುವ ನಿರೀಕ್ಷೆಯಿದೆ.











Discussion about this post