ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಚೀನಾದ ಮಕ್ಕಳಲ್ಲಿ ಉಸಿರಾಟದ ಕಾಯಿಲೆ ತೀವ್ರವಾಗಿ ಉಲ್ಬಣಗೊಂಡಿದ್ದು, ಇದಕ್ಕೆ ಕಾರಣ ಎನ್ನಲಾಗಿರುವ ವೈರಸ್ ಕುರಿತಾಗಿ ದೇಶದಲ್ಲೂ ಸಹ ಆತಂಕ ಸೃಷ್ಠಿಯಾಗಿದ್ದು, ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಹತ್ವದ ಎಚ್ಚರಿಕೆ ನೀಡಿದೆ.
ಚೀನಾದ ಮಕ್ಕಳಲ್ಲಿ ಉಸಿರಾಟದ ಕಾಯಿಲೆಗಳು ತೀವ್ರಗೊಂಡಿದ್ದು, ಅಲ್ಲಿನ ಆಸ್ಪತ್ರೆಗಳು ಮಕ್ಕಳಿಂದಲೇ ತುಂಬಿ ತುಳುಕುತ್ತಿವೆ. ವೈರಸ್ ಇದಕ್ಕೆ ಕಾರಣ ಎಂದು ಹೇಳಲಾಗಿದ್ದು, ಭಾರತಕ್ಕೂ ಸಹ ಇದು ಹರಡುವ ಸಾಧ್ಯತೆಯ ಕುರಿತಾಗಿ ಕೇಂದ್ರ ಸರ್ಕಾರ ಎಚ್ಚರಿಕೆ ವಹಿಸಿದೆ.

Also read: ತೀರ್ಥಹಳ್ಳಿ | ಭೀಕರ ರಸ್ತೆ ಅಪಘಾತ | ಓರ್ವ ಸಾವು
ಕೇಂದ್ರದ ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಈ ಐದು ರಾಜ್ಯದ ಪ್ರಮುಖ ನಗರಗಳಲ್ಲಿ ಹೈಅಲರ್ಟ್ ವಹಿಸಲಾಗಿದೆ. ಈ ಎಲ್ಲ ಆರೋಗ್ಯ ಮೂಲಸೌಕರ್ಯಗಳನ್ನು ಪರಿಶೀಲನೆ ಮಾಡುವಂತೆ ಹಾಗೂ ಈಗಾಗಲೇ ಎಲ್ಲ ರೀತಿಯ ಪರೀಕ್ಷೆಗೂ ಸಿದ್ದತೆ ಮಾಡಿಕೊಳ್ಳವಂತೆ ಹೇಳಿದೆ.

ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳುವುದು, ಆಗಾಗ್ಗೆ ಕೈಗಳನ್ನು ತೊಳೆಯುವುದು, ಮುಖವನ್ನು ಸ್ಪರ್ಶಿಸುವುದನ್ನು ತಪ್ಪಿಸುವುದು ಮತ್ತು ಕಿಕ್ಕಿರಿದ ಸ್ಥಳಗಳಲ್ಲಿ ಮಾಸ್ಕ್ ಬಳಸಬೇಕು ಎಂದು ಹೇಳಿದೆ.
ಕೇಂದ್ರದ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜಾಸ್ಥಾನ, ಗುಜರಾತ್, ಹರಿಯಾಣ, ಉತ್ತರಾಖಂಡ್, ತಮಿಳುನಾಡು ರಾಜ್ಯಗಳಲ್ಲೂ ಸಹ ಹೆಚ್ಚಿನ ಜಾಗ್ರತೆ ವಹಿಸಲಾಗಿದೆ. ಯಾವುದೇ ರೀತಿಯ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಪ್ರಮುಖವಾಗಿ ಈ ಎಲ್ಲ ರಾಜ್ಯಗಳ ಮಕ್ಕಳ ಘಟಕಗಳು ಹಾಗೂ ಔಷಧ ವಿಭಾಗಗಳಲ್ಲಿ ಸಾಕಷ್ಟು ವ್ಯವಸ್ಥೆಗಳನ್ನು ಮಾಡಬೇಕು ಎಂದು ಸೂಚನೆ ನೀಡಲಾಗಿದೆ.











Discussion about this post