ಕಲ್ಪ ಮೀಡಿಯಾ ಹೌಸ್ | ನವದೆಹಲಿ/ಶಿವಮೊಗ್ಗ |
ಆಗುಂಬೆ ಘಾಟಿಗೆ ಪರ್ಯಾಯವಾಗಿ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ ಸೇರಿದಂತೆ ಲೋಕಸಭಾ ಕ್ಷೇತ್ರದಲ್ಲಿ ವಿವಿಧ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಅವರು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ #Nitin Gadkari ಅವರಿಗೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಿದ ಸಂಸದರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಮುಖ ಐದು ಬೃಹತ್ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಕೋರಿದ್ದಾರೆ.
ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಈ ಕಾಮಗಾರಿಗಳಿಗೆ ಯೋಜನಾ ವರದಿ ತಯಾರಿಸಲು ಸಮಾಲೋಚಕರನ್ನು ನಿಯೋಜಿಸಲು ಸೂಚನೆ ನೀಡಿದರು.
ಅಲ್ಲದೇ, ಯೋಜನಾ ವರದಿ ಪಡೆದು ಮಂಜೂರಾತಿ ನೀಡಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
Also read: ಹಾಸನ | ಎಸ್’ಪಿ ಕಚೇರಿ ಆವರಣದಲ್ಲೇ ಪತ್ನಿಗೆ ಚಾಕು ಇರಿದ ಪೊಲೀಸ್ ಕಾನ್‌ಸ್ಟೇಬಲ್ | ಕಾರಣವೇನು?
ಯಾವೆಲ್ಲಾ ಯೋಜನೆಗಳಿಗೆ ಮನವಿ?
- ಆಗುಂಬೆ ಘಾಟಿ ರಸ್ತೆಗೆ ಪರ್ಯಾಯವಾಗಿ ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ
- ಕುಂದಾಪುರದಿಂದ ಗಂಗೊಳ್ಳಿ ಬಂದರಿನವರೆಗೆ 5.60 ಕಿ.ಮೀ ಉದ್ದದ ರಸ್ತೆ ಹಾಗೂ ಭಾರಿ ಸೇತುವೆ ನಿರ್ಮಾಣ
- ರಾಷ್ಟ್ರೀಯ ಹೆದ್ದಾರಿ 766 ಸಿ ಬೈಂದೂರಿನಿಂದ ವಿವಿಧೋದ್ದೇಶ ಬಂದರಿನವರೆಗೆ ತಾರಾಪತಿ ಅಳವೆಕೋಡಿ ಮೂಲಕ ವಿಸ್ತರಣೆ ಮಾಡಿ 3.80 ಕಿಮೀ ಉದ್ದದ ರಸ್ತೆ ಹಾಗೂ ಸೇತುವೆಗಳ ನಿರ್ಮಾಣ
- ರಾಷ್ಟ್ರೀಯ ಹೆದ್ದಾರಿ 766 ಸಿ ಬೈಂದೂರಿನಿಂದ ರಾಣಿಬೆನ್ನೂರಿನವರೆಗೆ ಬಾಕಿ ಉಳಿದ ಭಾಗಗಳಲ್ಲಿ ದ್ವಿಪಥ ರಸ್ತೆ ನಿರ್ಮಾಣ
- ರಾಷ್ಟ್ರೀಯ ಹೆದ್ದಾರಿ 369 ಇ ಸಾಗರದಿಂದ ಮರಕುಟಕವರೆಗೆ ದ್ವಿಪಥ ರಸ್ತೆ (ಸಾಗರ ಪಟ್ಟಣದ ಬೈಪಾಸ್ ರಸ್ತೆ ಸೇರಿ) ನಿರ್ಮಾಣ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post