ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸಿತ್ರಾಂಗ್ ಚಂಡಮಾರುತ Sitrang Cyclone ಹಿನ್ನೆಲೆ ಮುಂದಿನ ಕೆಲವು ದಿನ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಮಿಜೋರಾಂ ಹಾಗೂ ತ್ರಿಪುರದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಮಂಗಳವಾರ ತ್ರಿಪುರಾದಲ್ಲಿ ಗುಡುಗು, ಮಿಂಚಿನಿಂದ ಕೂಡಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಚಂಡಮಾರುತ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಶ್ಚಿಮ ಬಂಗಾಳ ಸರ್ಕಾರವು ಅಪಾಯಕಾರಿ ಸ್ಥಳದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದು, ಪರಿಹಾರ ಸಾಮಾಗ್ರಿ ವಿತರಣೆ ಸೇರಿದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
ದಕ್ಷಿಣ 24 ಪರಗಣಗಳ ಬಕ್ಖಾಲಿ ಸಮುದ್ರ ತೀರದಲ್ಲಿ ನಾಗರೀಕ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದ್ದು, ಬೀಚ್ನಲ್ಲಿ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಹಾಗೂ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post