ಕಲ್ಪ ಮೀಡಿಯಾ ಹೌಸ್
ನವದೆಹಲಿ: ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಈ ಊಹಾಪೋಹಗಳು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರೋಧಿಗಳಿಗೆ ಖಡಕ್ ಸಂದೇಶ ನೀಡಿದ್ದಾರೆ.
ನವದೆಹಲಿಯಲ್ಲಿಂದು ಮಾತನಾಡಿದ ಅವರು, ರಾಜೀನಾಮೆ ಕೊಡಿ ಎಂದು ಹೈಕಮಾಂಡ್ ಕೇಳಿಲ್ಲ. ಅಲ್ಲದೇ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿನ ಎಲ್ಲ ಪ್ರಮುಖ ಬೆಳವಣಿಗೆಗಳ ಕುರಿತಾಗಿ ಚರ್ಚಿಸಿದ್ದೇನೆ. ಆಗಸ್ಟ್ ಮೊದಲ ವಾರದಲ್ಲಿ ನವದೆಹಲಿಗೆ ಮತ್ತೆ ಆಗಮಿಸುತ್ತೇನೆ ಎಂದಿದ್ದಾರೆ.
ಕೇಂದ್ರದ ಹಿರಿಯ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಕೂಡ ಮುಖ್ಯಮಂತ್ರಿಗಳು ಇಂದು ಭೇಟಿಯಾಗಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post