ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೆಹಲಿ-ಎನ್ಸಿಆರ್ನಲ್ಲಿ ಸೋಮವಾರ ಪ್ರಬಲ ಭೂಕಂಪ #Earthquake ಸಂಭವಿಸಿದ್ದು, 4.0 ತೀವ್ರತೆ ಇತ್ತು ಎಂದು ಅಂದಾಜಿಸಲಾಗಿದೆ.
ಬೆಳಗ್ಗೆ 5.36 ಸುಮಾರಿಗೆ ಭೂಮಿ ಕಂಪಿಸಿದ್ದು, ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ.
ದೌಲಾ ಕುವಾನ್‌ನಲ್ಲಿರುವ ದುರ್ಗಾಬಾಯಿ ದೇಶಮುಖ್ ಮಹಾವಿದ್ಯಾಲಯದ ಬಳಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಚ್ಚಿಬಿದ್ದ ಜನತೆ
ಭೂಮಿಯ ಕಂಪನಕ್ಕೆ ಹೆದರಿದ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಭೂಕಂಪನದಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. 5 ಕಿಲೋಮೀಟರ್ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಜನತೆಗೆ ಪ್ರಧಾನಿ ಸಂದೇಶ
ಭೂಕಂಪನ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, #PM Narendra Modi ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಪ್ರತಿಯೊಬ್ಬರೂ ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಮತ್ತು ಸಂಭವನೀಯ ಭೂಕಂಪಗಳ ಬಗ್ಗೆ ಎಚ್ಚರದಿಂದಿರುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post