ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸಂಸತ್ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 146 ಸಂಸದರನ್ನು ಅಮಾನತು ಮಾಡಿರುವ ಕ್ರಮವನ್ನು ವಿರೋಧಿಸಿ ಇಂಡಿ INDI ಒಕ್ಕೂಟದ ಸದಸ್ಯರು ರಾಷ್ಟ್ರ ರಾಜಧಾನಿಯಲ್ಲಿ ಧರಣಿ ನಡೆಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarjuna Kharge ನೇತೃತ್ವದಲ್ಲಿ ಇಂಡಿ ಒಕ್ಕೂಟದ ಸದಸ್ಯರು ಜಂತರ್ ಮಂತರ್’ನಲ್ಲಿ ಧರಣಿ ನಡೆಸಿದ್ದು, ಅಮಾನತು ಕ್ರಮವನ್ನು ವಿರೋಧಿಸಿದ್ದಾರೆ.
ಈ ವೇಳೆ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ, ಸಂಸತ್ ಹಾಗೂ ಸಂಸದೀಯ ಹಾಗೂ ಸಂವಿಧಾನದ ಘನತೆ ಉಳಿಸಲು ನಾವು ಧರಣಿ ನಡೆಸುತ್ತಿದ್ದೇವೆ. ಸಂಸದರನ್ನು ಅಮಾನತು ಮಾಡಿರುವ ಕ್ರಮವನ್ನು ಬಲವಾಗಿ ಖಂಡಿಸುತ್ತೇವೆ ಎಂದರು.
Also read: ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ? ಪತ್ರಕರ್ತರಿಗೆ ಸಿದ್ದರಾಮಯ್ಯ ಪ್ರಶ್ನೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಎನ್’ಸಿಪಿ ವರಿಷ್ಠ ಶರದ್ ಪವಾರ್ ಮತ್ತು ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post