ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ 60 ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಪ್ರಸನ್ನಾಬಿನಂದನ ಕಾರ್ಯಕ್ರಮದ ಭಾಗವಾಗಿ ದೆಹಲಿಯ ಪೇಜಾವರ ಮಠದಲ್ಲಿ ತುಲಾಭಾರ ಸೇವೆ ಸಲ್ಲಿಸುತ್ತಿದ್ದ ವೇಳೆ ತಕ್ಕಡಿ ಕಳಚಿ ಬಿದ್ದ ಘಟನೆ ನಡೆದಿದೆ.
ಪ್ರಸ್ತುತ ಉಡುಪಿ ಪೇಜಾವರ ಶ್ರೀ Pejawara Shri ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ದೆಹಲಿ ಪ್ರವಾಸದಲ್ಲಿದ್ದು, ಚಾತುರ್ಮಾಸ್ಯ ಕಾರ್ಯಕ್ರಮ ಪೂರ್ಣಗೊಳಿಸಿ ಬಂದ ಹಿನ್ನೆಲೆಯಲ್ಲಿ ಪೇಜಾವರ ಶ್ರೀಗಳಿಗೆ ಭಕ್ತರು ತುಲಾಭಾರ ಸೇವೆ ನಡೆಸುತ್ತಿದ್ದಾಗ ತಕ್ಕಡಿಯ ಹಗ್ಗ ಕಳಚಿ ಬಿದ್ದಿದೆ ಎನ್ನಲಾಗಿದೆ.
ತಕ್ಕಡಿಯ ಸರಳು ಪೇಜಾವರ ಶ್ರೀಗಳ ತಲೆಯ ಮೇಲೆ ಕಳಚಿ ಬಿದ್ದ ಪರಿಣಾಮ ತಲೆಗೆ ಚಿಕ್ಕ ಗಾಯವಾಗಿದ್ದು, ಪೇಜಾವರ ಶ್ರೀಗಳು ಅನಾಹುತದಿಂದ ಪಾರಾಗಿದ್ದಾರೆ. ತರಚಿದ ಗಾಯದೊಂದಿಗೆ ಪೇಜಾವರ ಶ್ರೀಗಳು ಸುರಕ್ಷಿತವಾಗಿದ್ದಾರೆ ಎಂದು ಭಕ್ತರು ತಿಳಿಸಿದ್ದಾರೆ.
Also read: ಸಿಗಂದೂರು-ತುಮುರಿ ಸೇತುವೆ ಕಾಮಗಾರಿ ಯಾವ ಹಂತದಲ್ಲಿದೆ? ಸಂಸದ ರಾಘವೇಂದ್ರ ಪ್ರತಿಕ್ರಿಯೆ ಹೀಗಿದೆ
ತಕ್ಕಡಿ ಕುಸಿದು ಬೀಳುತ್ತಿದ್ದಂತೆ ಭಕ್ತರು ಆತಂಕಗೊಂಡರು. ಆದರೆ ಕೈ ಸನ್ನೆಯ ಮೂಲಕ ತಮಗೆ ಏನೂ ಆಗಿಲ್ಲ ಎಂದು ಪೇಜಾವರ ಶ್ರೀ ಸನ್ನೆ ಮಾಡಿದ್ದಾರೆ. ಇನ್ನು ತಕ್ಷಣ ವೈದ್ಯರು ಆಗಮಿಸಿ, ಪರೀಕ್ಷಿಸಿ ಚಿಕಿತ್ಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post