ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದಲ್ಲಿ ಹಿಂದೂ ಧರ್ಮಕ್ಕೆ ಬೆದರಿಕೆಯಿದೆ ಎಂಬ ಮಾತುಗಳನ್ನು ತಳ್ಳಿ ಹಾಕಿರುವ ಕೇಂದ್ರ ಸರ್ಕಾರ ಇದು ಕೇವಲ ಕಾಲ್ಪನಿಕ ಎಂದು ಹೇಳಿದೆ.
ಈ ಕುರಿತಂತೆ ಗೃಹ ವ್ಯವಹಾರಗಳ ಸಚಿವಾಲಯ ಹೇಳಿಕೆ ನೀಡಿದ್ದು, ಇತ್ತೀಚೆಗೆ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಕೇಂದ್ರ ಸರ್ಕಾರ ಈ ಪ್ರತಿಕ್ರಿಯೆ ನೀಡಿದ್ದು, ಹಿಂದೂ ಧರ್ಮ ಅಪಾಯದಲ್ಲಿದೆ ಎಂಬ ಹೇಳಿಕೆಯನ್ನು ತಳ್ಳಿಹಾಕಿದೆ. ಹಿಂದೂ ಧರ್ಮಕ್ಕೆ ಬೆದರಿಕೆಯಿದೆ ಎಂದು ಕಳವಳ ವ್ಯಕ್ತಪಡಿಸುವ ಯಾವುದೇ ದಾಖಲೆಗಳಾಗಲಿ, ಸಾಕ್ಷಿಗಳಾಗಲಿ ಸಿಕ್ಕಿಲ್ಲ ಎಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post