ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಜ್ಯದ ಶಾಲಾ ಕಾಲೇಜಿನ ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸುಪ್ರೀಂ ಕೋರ್ಟ್ನಲ್ಲಿ Supreme Court ಮುಂದಿನ ವಾರ ವಿಚಾರಣೆಗೆ ಬರಲಿದೆ.
ಈ ಕುರಿತಂತೆ ಇಂದಿನ ಕಲಾಪದಲ್ಲಿ ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ಅವರು ಹಿಜಾಬ್ ಕುರಿತ ಅರ್ಜಿ ವಿಚಾರಣೆ ವಿಳಂಬವಾಗುತ್ತಿರುವುದನ್ನು ಪ್ರಸ್ತಾಪಿಸಿದರು. ಇದನ್ನು ಆಲಿಸಿದ ಮುಖ್ಯನ್ಯಾಯಮೂರ್ತಿ ಎನ್.ವಿ. ರಮಣ ಅವರು, ಮುಂದಿನ ವಾರದಲ್ಲಿ ಸೂಕ್ತ ಪೀಠದಲ್ಲಿ ಅರ್ಜಿ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದಿದ್ದಾರೆ.
ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಈ ಹಿಂದೆ ರಾಜ್ಯ ಸರ್ಕಾರ ಆದೇಶ ಮಾಡಿತ್ತು. ಈ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿತ್ತು. ಹಿಜಾಬ್ ಇಸ್ಲಾಂ ಧರ್ಮದ ಅಗತ್ಯ ಆಚರಣೆಗಳ ಭಾಗವಲ್ಲ ಎಂದು ಹೇಳಿತ್ತು. ಈ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸೇರಿದಂತೆ ಹಲವು ಮಂದಿ ಸುಪ್ರೀಂಕೋಟ್’ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
Also read: ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post