ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದ ಮುಂದಿನ ಮುಖ್ಯನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ D.Y. Chandrachood ಅವರ ಹೆಸರನ್ನು ಹಾಲಿ ಸಿಜೆಐ ಉದಯ್ ಉಮೇಶ್ ಲಲಿತ್ ಅವರು ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ಸಿಜೆಐ ಲಲಿತ್ ಅವರು ಚಂದ್ರಚೂಡ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಸೂಚಿಸಿದ್ದು, ಉನ್ನತ ನ್ಯಾಯಾಲಯದ ನ್ಯಾಯಾಧೀಶರು ನಡೆಸಿದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ಈ ಶಿಫಾರಸು ಮಾಡಲಾಗಿದೆ.
ನ್ಯಾಯಮೂರ್ತಿ ಚಂದ್ರಚೂಡ್ ಅವರು ನ.9ರಂದು ಭಾರತದ 50 ನೆಯ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.
Also read: ಜನರ ಸೇವೆಗಾಗಿ ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ: ನಟಿ ಭಾವನಾ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post