ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪೆಟ್ರೋಲಿಯಂ ಕಂಪೆನಿಗಳು ಇಂಧನ ಬೆಲೆ ಏರಿಕೆ ಮಾಡುತ್ತಿದ್ದಂತೆ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡ 15 ರೂ. ಏರಿಕೆ ಮಾಡಿದ್ದು, ದೇಶಾದ್ಯಂತ ಇಂದೇ ನೂತನ ದರ ಜಾರಿಗೆ ಬರಲಿದೆ.
ಈ ಮೂಲಕ ಸಬ್ಸಿಡಿಯೇತರ ಅಡುಗೆ ಅನಿಲ ಸಿಲಿಂಡರ್ ದರ ರಾಜಧಾನಿ ದೆಹಲಿಯಲ್ಲಿ 14.2 ಕೆಜಿಗೆ 899 ರೂ. 50 ಪೈಸೆಯಾಗಿದೆ. 5 ಕೆಜಿ ಸಿಲಿಂಡರ್ ಬೆಲೆ 502 ರೂಪಾಯಿಯಾಗಿದೆ.
ಕಳೆದ ಅಕ್ಟೋಬರ್ 1ರಂದು ಪೆಟ್ರೋಲಿಯಂ ಕಂಪೆನಿಗಳು ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 43.5ರೂ.ನಷ್ಟು ಹೆಚ್ಚಳ ಮಾಡಿದ್ದವು. ಇದೀಗ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡ ಹೆಚ್ಚಿಸುವ ಮೂಲಕ ಗ್ರಾಹಕರಿಗೆ ಮತ್ತಷ್ಟು ಶಾಕ್ ನೀಡಿದೆ. ಕಳೆದ ಎರಡು ತಿಂಗಳಲ್ಲಿ ಅಡುಗೆ ಅನಿಲ ಬೆಲೆ ಏರಿಕೆಯಾಗುತ್ತಿರುವುದು ಇದು ನಾಲ್ಕನೇ ಬಾರಿ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post