ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ನ ಆವರಣದಲ್ಲಿರುವ ಮಸೀದಿ ತೆರವು ಆದೇಶಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ತಿರಸ್ಕರಸಿದ್ದು, ಮಸೀದಿಯನ್ನು 3 ತಿಂಗಳೊಳಗೆ ತೆರವುಗೊಳಿಸುವಂತೆ ಕೋರ್ಟ್ ಸೋಮವಾರ ಅಧಿಕಾರಿಗಳಿಗೆ ಸೂಚಿಸಿದೆ.
ಅಲ್ಲದೇ ‘ಮಸೀದಿ ಜಾಗದ ಗುತ್ತಿಗೆ ಅವಧಿಯು ಮುಕ್ತಾಯಗೊಂಡಿದ್ದು ಅವಧಿ ವಿಸ್ತರಣೆ ಕೋರಿ ಅರ್ಜಿ ಸಲ್ಲಿಸುವಂತಿಲ್ಲ. ಮಸೀದಿ ನಿರ್ಮಾಣಕ್ಕೆ ಬೇರೆಡೆ ಜಾಗ ಮಂಜೂರು ಮಾಡಬಹುದು’ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ. ಹಾಗೆಯೇ 3 ತಿಂಗಳೊಳಗಾಗಿ ಮಸೀದಿ ತೆರವು ಮಾಡದೆ ಹೋದಲ್ಲಿ ಅಧಿಕಾರಿಗಳು ಹಾಗೂ ಅಲಹಾಬಾದ್ ಹೈಕೋರ್ಟ್‌ಗೆ ಮಸೀದಿ ತೆರವು ಮಾಡುವ ಮುಕ್ತ ಅಧಿಕಾರವಿರುತ್ತದೆ’ ಎಂದೂ ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ Supreme Court ಪೀಠ ತಿಳಿಸಿದೆ.
ಮಸೀದಿ ತೆರವುಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್ 2017ರಲ್ಲಿ ಆದೇಶಿಸಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ವಕ್ಫ್ ಮಸೀದಿ ಮತ್ತು ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್‌ಗಳು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದವು. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಆರ್. ಶಾ ಹಾಗೂ ನ್ಯಾಯಮೂರ್ತಿ ಸಿ.ಟಿ ರವಿಕುಮಾರ್ ಅವರ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.
Also read: ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಜಗ್ಗೇಶ್: ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post