ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಬಾಲಾಕೋಟ್ ವೈಮಾನಿಕ ಸರ್ಜಿಕಲ್ ಸ್ಟ್ರೈಕ್ ನಂತರದ ಘಟನೆಯಲ್ಲಿ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಗೆ ಇಂದು ವೀರ ಚಕ್ರ ಪಶಸ್ತಿ ಪ್ರದಾನ ಮಾಡಲಾಯಿತು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ನಡೆದ ಸಮಾರಂಭದಲ್ಲಿ ಅಭಿನಂದನ್ ಅವರಿಗೆ ವೀರ ಚಕ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಪುಲ್ವಾಮ ಉಗ್ರ ದಾಳಿಗೆ ಪ್ರತೀಕಾರವಾಗಿ ಬಾಲಾಕೋಟ್ ನಲ್ಲಿ ಭಾರತ ನಡೆಸಿದ್ದ ವೈಮಾನಿಕ ದಾಳಿಗೆ ಪ್ರತಿಯಾಗಿ ಪಾಕ್ ನಡೆಸಿದ ದಾಳಿಯ ವೇಳೆ ಫೆ.27, 2019 ರಲ್ಲಿ ಪಾಕಿಸ್ತಾನದ ಎಫ್-16 ಫೈಟರ್ ಜೆಟ್ ನ್ನು ಹೊಡೆದುರುಳಿಸಿ, ಸಂಘರ್ಷದ ಪರಿಸ್ಥಿತಿಯಲ್ಲಿ ಶೌರ್ಯದಿಂದ ಹೋರಾಡಿದ್ದಕ್ಕಾಗಿ ಅಭಿನಂದನ್ ಅವರನ್ನು ಗೌರವಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post