ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಆಂಧ್ರಪ್ರದೇಶದ ವಿಜಯಪುರಂನಲ್ಲಿ ನಡೆದಿರುವ ರೈಲು ಅಪಘಾತದ Vijayapuram train accident ಬಗ್ಗೆ ಪ್ರಧಾನಿ ಮೋದಿ ರೈಲ್ವೆ ಸಚಿವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದು, ದುರ್ಘಟನೆಯಲ್ಲಿ ಸಾವನ್ನಪ್ಪಿರುವವರಿಗೆ ಪ್ರಧಾನಿ ನರೇಂದ್ರ ಮೋದಿ PM Narendra Modi ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ಕಾರ್ಯಾಲಯ ಸಾಮಾಜಿಕ ಜಾಲತಾಣದಲ್ಲಿ ಈಬಗ್ಗೆ ಟ್ವೀಟ್ ಮಾಡಿದ್ದು, ಅಲಮಂದ, ಕಂತಕಪಲ್ಲಿ ಸೆಕ್ಷನ್ ನಡುವೆ ರೈಲು ಅಪಘಾತದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ಮೋದಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜೊತೆ ಮಾತನಾಡಿದರು. ಸಂತ್ರಸ್ತರಿಗೆ ಅಧಿಕಾರಿಗಳು ಎಲ್ಲ ರೀತಿಯ ನೆರವು ನೀಡುತ್ತಿದ್ದಾರೆ. “ಪ್ರಧಾನಿಯವರು ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಾರೆ ಮತ್ತು ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಾರೆ” ಎಂದು ತಿಳಿಸಿದ್ದಾರೆ.
Also read: ಚೆನ್ನೈ ಕನ್ನಡ ಬಳಗದ ಸಾಧನೆಯ ಹಾದಿಯೇ ಒಂದು ಮೈಲಿಗಲ್ಲು
ಇತ್ತೀಚಿನ ಮಾಹಿತಿಯ ಪ್ರಕಾರ ಘಟನೆಯಲ್ಲಿ ಕನಿಷ್ಟ 8 ಮಂದಿ ಸಾವನ್ನಪ್ಪಿದ್ದು, 32ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎರಡು ರೈಲುಗಳ ನಡುವೆ ಈ ಅಪಘಾತ ಸಂಭವಿಸಿ ಮೂರು ಬೋಗಿಗಳು ಹಳಿ ತಪ್ಪಿದ್ದವು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post