ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡುವ ವೇಳೆ ಅನಿರೀಕ್ಷಿತವಾಗಿ ನಮ್ಮ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಅವರು ಸಿಕ್ಕಿದ್ದರೆ ಹೊರತು, ಅದಕ್ಕೇನು ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ B Y Vijayendra ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಹಲವು ವಿಚಾರಗಳ ಕುರಿತು ರಾಷ್ಟ್ರೀಯ ಅಧ್ಯಕ್ಷರ ಸಮ್ಮುಖದಲ್ಲಿ ಚರ್ಚೆ ಆಗಿದೆ. ಅಭ್ಯರ್ಥಿಗಳ ಕುರಿತು ಅಂತಿಮವಾಗಿ ವರಿಷ್ಠರು ನಿರ್ಣಯ ಮಾಡಲಿದ್ದಾರೆ ಎಂದು ಹೇಳಿದರು.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರನ್ನು Prahlad Joshi ಭೇಟಿ ಮಾಡುವ ವೇಳೆ ಅನಿರೀಕ್ಷಿತವಾಗಿ ನಮ್ಮ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರು ಸಿಕ್ಕಿದ್ದರು. ಅವರ ಜೊತೆ ಕುಳಿತು ಚರ್ಚಿಸಿದ್ದೇವೆ. ಅದಕ್ಕೆ ಬಹಳ ವಿಶೇಷತೆ ಅಥವಾ ಬೇರೆ ಅರ್ಥ ಕೊಡುವ ಅಗತ್ಯವಿಲ್ಲ ಎಂದು ಈ ಕುರಿತ ಪ್ರಶ್ನೆಗೆ ನಗುತ್ತಲೇ ಉತ್ತರ ನೀಡಿದರು.
Also read: ಫೆ.11ರಂದು ಕಿರುತೆರೆ ನಟಿ, ನಿರೂಪಕಿ ಚಂದನಾ ಭರತನಾಟ್ಯ ರಂಗಪ್ರವೇಶ
ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ J P Nadda ಅವರನ್ನು ಭೇಟಿಯಾಗಿದ್ದು, ಮುಂಬರುವ ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಕುರಿತಾಗಿ ಚರ್ಚೆ ನಡೆಸಲಾಯಿತು ಎಂದರು.
ನಾನು ರಾಜ್ಯಾಧ್ಯಕ್ಷನಾಗಿ ಎಲ್ಲರನ್ನು ಜೊತೆ ಸೇರಿಸಿಕೊಂಡು ಪಕ್ಷವನ್ನು ಮುನ್ನಡೆಸುತ್ತಿರುವ ಕುರಿತು ನಡ್ಡಾಜೀ ಅವರು ಸಂತಸ ಸೂಚಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಂದು ಹೊಸ ದಾಖಲೆ ಬರೆಯಲಿದೆ. ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ನಾನು ಭರವಸೆ ನೀಡಿದ್ದೇನೆ ಎಂದು ಪ್ರಶ್ನೆಗೆ ಉತ್ತರಿಸಿದರು.
ರಾಧಾಮೋಹನ್ ದಾಸ್ ಜೀ ಅವರು ನಮ್ಮ ರಾಜ್ಯದ ಉಸ್ತುವಾರಿಗಳು. ನಿನ್ನೆ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದೇನೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವತಯಾರಿ ಕುರಿತು ಚರ್ಚೆ ಮಾಡಿದ್ದಾನೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post