ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಕರ್ನಾಟಕ ರಾಜ್ಯ ಅಡಿಕೆ ಬೆಳೆಗಾರರ ಹಿತ ಕಾಪಾಡುವ ನಿಟ್ಟಿನಲ್ಲಿ ಅಕ್ರಮ ವ್ಯಾಪಾರ ತಡೆಗಟ್ಟಲು ಕಟ್ಟುನಿಟ್ಟಿನ ಕಾರ್ಯವಿಧಾನ ಜಾರಿಗೆ ತರುವುದು ಹಾಗೂ ಆಮದು ಮಾಡಿಕೊಳ್ಳುವ ಅಡಿಕೆಗೆ ಹೆಚ್ಚಿನ ಸುಂಕ ವಿಧಿಸಿ, ರೋಗಗಳಿಗೆ ವೈಜ್ಞಾನಿಕಾಗಿ ಅಭಿವೃದ್ಧಿಪಡಿಸಿದ ಔಷಧವನ್ನು ಪರಿಚಯಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
During Zero Hour today, I requested the Union government to impose heavy import duty on imported arecanut, Introduce scientifically developed medicine to diseases, and put a stringent mechanism to prevent illegal trade of arecanut. @BSBommai @BSYBJP @BJP4Karnataka @AgriGoI pic.twitter.com/AgvIgnXR9l
— B Y Raghavendra (@BYRBJP) December 15, 2022
ಈ ಕುರಿತಂತೆ ಸಂಸತ್’ನ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ಕರ್ನಾಟಕವೂ ಸೇರಿದಂತೆ ದೇಶದ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ ರಾಜ್ಯದ 16 ಜಿಲ್ಲೆಗಳಲ್ಲಿ ಅಡಿಕೆ ಬೆಳೆಯಲಾಗುತ್ತದೆ. ಕರ್ನಾಟಕದಲ್ಲಿ ಸುಮಾರು 10 ಲಕ್ಷ ಕುಟುಂಬಗಳು ಅಡಿಕೆ ಕೃಷಿಯನ್ನು ಅವಲಂಭಿಸಿವೆ ಎಂದು ಮಾಹಿತಿ ನೀಡಿದ್ದಾರೆ.
ದೇಶದ ಒಟ್ಟು ಉತ್ಪಾದನೆಯಾದ 16 ಲಕ್ಷದ 50 ಸಾವಿರ ಮೆಟ್ರಿಕ್ ಟನ್’ಗಳಲ್ಲಿ ಕರ್ನಾಟಕ ರಾಜ್ಯವು ಸುಮಾರು ಶೇ.69ರಷ್ಟು ಅಡಿಕೆಯನ್ನು ಉತ್ಪಾದಿಸುತ್ತವೆ. ಇದರ ಒಟ್ಟು ಮೌಲ್ಯ ಸುಮಾರು 8 ಸಾವಿರದ 250 ಕೋಟಿ. ಇದು ಜಿಎಸ್’ಟಿ ಮತ್ತು ವಿವಿಧ ಉತ್ಪನ್ನಗಳ ಮೇಲೆ ಸೆಸ್ ರೂಪದಲ್ಲಿ ಬೊಕ್ಕಸಕ್ಕೆ 24 ಸಾವಿರ 750 ಕೋಟಿ ರೂಪಾಯಿಗಳ ಬೃಹತ್ ಆದಾಯವನ್ನು ನೀಡುತ್ತಿದೆ. ಬೆಳೆಗಾರರು ನಿಜವಾಗಿಯೂ ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದು, ಅಡಿಕೆ ಬೆಳೆಗಾರರು ಎಲೆ ಚುಕ್ಕಿ ರೋಗದಿಂದ ತತ್ತರಿಸುತ್ತಿದ್ದಾರೆ. ಹಾಗಾಗಿ, ಇಳುವರಿಯಲ್ಲಿ ಭಾರಿ ಕುಸಿತ ಉಂಟಾಗಿ ಶೇ.40ರಿಂದ 50ಕ್ಕಿಂತ ಕಡಿಮೆಯಾಗಿದೆ. ಬೆಲೆ ಕುಸಿತದಿಂದ ಬೆಳೆಗಾರರಿಗೆ , ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ಹೀಗಾಗಿ, ರೈತರು ಅಸಹಾಯಕ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂದು ಅಡಿಕೆ ಬೆಳೆಗಾರರ ಸಮಸ್ಯೆಯನ್ನು ತೆರೆದಿಡುವ ಪ್ರಯತ್ನ ಮಾಡಿದ್ದಾರೆ.
ಈ ವರ್ಷ ಸೆಪ್ಟೆಂಬರ್ ಮೊದಲ ವಾರದಲ್ಲಿ ಅಡಿಕೆ ಬೆಲೆ ಕ್ವಿಂಟಾಲ್’ಗೆ 58 ಸಾವಿರ ರೂ. ಇದ್ದದ್ದು, ಡಿಸೆಂಬರ್ ಎರಡನೆಯ ವಾರದಲ್ಲಿ 39 ಸಾವಿರಕ್ಕೆ ಇಳಿದಿದೆ. ಇದಲ್ಲದೇ, ಎಲೆ ಚುಕ್ಕಿ ರೋಗದಿಂದ ಅಡಿಕೆ ಇಳುವರಿ ಕುಸಿತದ ಜೊತೆಗೆ ಬೆಲೆ ಕುಸಿದಿರುವುದು ಆತಂಕ ಹಾಗೂ ಮನದಾಳದಲ್ಲಿ ಆತಂಕ ಮೂಡಿಸಿದೆ. ಹೀಗಾಗಿ, ಅಕ್ರಮ ವ್ಯಾಪಾರ ತಡೆಗಟ್ಟಲು ಕಟ್ಟುನಿಟ್ಟಿನ ಕಾರ್ಯವಿಧಾನ ಜಾರಿಗೆ ತರುವುದು ಹಾಗೂ ಆಮದು ಮಾಡಿಕೊಳ್ಳುವ ಅಡಿಕೆಗೆ ಹೆಚ್ಚಿನ ಸುಂಕ ವಿಧಿಸಿ, ರೋಗಗಳಿಗೆ ವೈಜ್ಞಾನಿಕಾಗಿ ಅಭಿವೃದ್ಧಿಪಡಿಸಿದ ಔಷಧವನ್ನು ಪರಿಚಯಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
Also read: ಈ ಬಾರಿ ಶಿವಮೊಗ್ಗ ಜಿಲ್ಲಾಧಿಕಾರಿ ಎಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post