ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಬಿಕಿನಿ, ಮುಸುಕು, ಜೀನ್ಸ್ ಅಥವಾ ಹಿಜಾಬ್ ಯಾವುದೇ ವಸ್ತ್ರವಾಗಿರಲಿ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ್ ಗಾಂಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Whether it is a bikini, a ghoonghat, a pair of jeans or a hijab, it is a woman’s right to decide what she wants to wear.
This right is GUARANTEED by the Indian constitution. Stop harassing women. #ladkihoonladsaktihoon
— Priyanka Gandhi Vadra (@priyankagandhi) February 9, 2022
ಹಿಜಾಬ್ ವಿಚಾರವಾಗಿ ಕರ್ನಾಟಕದಲ್ಲಿ ಭುಗಿಲೆದ್ದಿರುವ ವಿವಾದದ ಬಗ್ಗೆ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಯಾವ ರೀತಿಯ ಬಟ್ಟೆ ಧರಿಸಬೇಕೆಂದು ಮಹಿಳೆಯ ಇಚ್ಛೆಗೆ ಬಿಟ್ಟ ವಿಚಾರವಾಗಿದ್ದು, ಅದನ್ನು ಪ್ರಶ್ನಿಸುವುದು ಸೂಕ್ತವಲ್ಲ. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post