ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಹತ್ವದ ಬೆಳವಣಿಗೆಯೊಂದರಲ್ಲಿ ಆಹಾರ ಹಾಗೂ ಔಷಧ ಉತ್ಪನ್ನಗಳಿಗೆ ಹಲಾಲ್ ಪ್ರಮಾಣಪತ್ರ ನೀಡುವುದನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ UPCM Yogi Adithynath ಆದೇಶಿಸಿದ್ದು, ಇದು ತತಕ್ಷಣದಿಂದಲೇ ಜಾರಿಗೆ ಬರುವಂತೆ ಸೂಚನೆ ನೀಡಿದ್ದಾರೆ.
ಉತ್ತರ ಪ್ರದೇಶ ಸರ್ಕಾರವು ಹಲಾಲ್ Halal ಪ್ರಮಾಣೀಕರಣದೊಂದಿಗೆ ಆಹಾರ, ಔಷಧಗಳು ಮತ್ತು ಸೌಂದರ್ಯವರ್ಧಕ ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ.
ಈ ಕುರಿತಂತೆ ಅಲ್ಲಿನ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಗೊಂದಲವನ್ನು ತಡೆಗಟ್ಟಲು ನಿಷೇಧ ಹೇರಲಾಗಿದೆ ಎಂದು ತಿಳಿಸಿದ್ದಾರೆ.
Also read: ಇಂಡಿಗೋ, ಸ್ಟಾರ್ ಏರ್ ನಂತರ ಶಿವಮೊಗ್ಗಕ್ಕೆ ಶೀಘ್ರ ಬರಲಿವೆ ಮತ್ತೆರಡು ಕಂಪೆನಿ ವಿಮಾನ
ಉತ್ತರ ಪ್ರದೇಶದ ಆಹಾರ ಆಯುಕ್ತರ ಆದೇಶವು, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಹಲಾಲ್ ಪ್ರಮಾಣೀಕೃತ ಖಾದ್ಯ ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ತತಕ್ಷಣವೇ ಜಾರಿಗೆ ಬರುವಂತೆ ಉತ್ತರ ಪ್ರದೇಶದಲ್ಲಿ ನಿಷೇಧಿಸಲಾಗಿದೆ ಎಂದು ಹೇಳಿದೆ.
ಹಲಾಲ್ ಪ್ರಮಾಣೀಕರಣವು ಉತ್ಪನ್ನಗಳು ಮತ್ತು ಸೇವೆಗಳು ಇಸ್ಲಾಮಿಕ್ ಕಾನೂನಿಗೆ ಅನುಗುಣವಾಗಿರುವುದನ್ನು ಖಚಿತಪಡಿಸುತ್ತದೆ. ಆಹಾರ ಪದಾರ್ಥಗಳ ಗುಣಮಟ್ಟವನ್ನು ನಿರ್ಧರಿಸುವ ಹಕ್ಕು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ 2006ರ ಅಡಿಯಲ್ಲಿ ನಮೂದಿಸಲಾದ ಅಧಿಕಾರಿಗಳಿಗೆ ಮಾತ್ರ ಇರುತ್ತದೆ ಎಂದು ಆಯುಕ್ತರ ಆದೇಶದಲ್ಲಿ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post