ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಸಂಸದರಾದ ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರದ ಕೃಷಿ ಇಲಾಖೆ, ಭಗವಂತ್ ಖೂಬಾ ಅವರಿಗೆ ಕೇಂದ್ರದ ರಸಗೊಬ್ಬರ ಖಾತೆ ನೀಡಿರುವುದು ಸಂತಸ ತಂದಿದ್ದು, ನೂತನ ಸಚಿವರನ್ನು ಭೇಟಿ ಮಾಡಲು ಮುಂದಿನ ವಾರ ದೆಹಲಿಗೆ ತೆರಳುತ್ತಿರುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ ಬಿ.ಸಿ. ಪಾಟೀಲರು, ಸಿಎಂ ಯಡಿಯೂರಪ್ಪ ರಾಜ್ಯದ ಅಭಿವೃದ್ಧಿಗಳು ಸರ್ಕಾರದ ಸಾಧನೆಗಳ ಬಗ್ಗೆ ಚರ್ಚಿಸಲು ದೆಹಲಿಯಲ್ಲಿ ಪ್ರಧಾನಿಗಳು ಹಾಗೂ ಕೇಂದ್ರದ ಸಚಿವರನ್ನು ಭೇಟಿ ಮಾಡಲಿದ್ದಾರೆಯೇ ಹೊರತು ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದರು.
ಕಾಂಗ್ರೆಸ್ ನಲ್ಲಿ ಅರ್ಜಿಗಳು ಸೇಲ್ ಆಗದೇ ಹಾಗೇ ಉಳಿದಿವೆ. ಹೀಗಾಗಿ ಅರ್ಜಿ ಸೇಲ್ ಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮುಂದಾಗಿದ್ದು, ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಹಿಂದಿರುಗುವ ಪ್ರಶ್ನೆಯೇ ಇಲ್ಲ. ನಾವು ವಲಸಿಗರಲ್ಲ. ಸೊಸೆ ಮನೆಗೆ ಬಂದ ಮೇಲೆ ಮನೆಯ ಮಗಳಂತೆ. ಅದರಂತೆ ನಾವು ಸಹ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post