ಜಲ್ಪೈಗುರಿ(ಪಶ್ಚಿಮ ಬಂಗಾಳ): ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರನ್ನು ಹೇಯವಾಗಿ ಅತ್ಯಾಚಾರ ನಡೆಸಿ, ಆಕೆ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತೂರಿಸಿ ಹತ್ಯೆ ಯತ್ನ ಮಾಡಿರುವ ಭೀಕರ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಭೂಮಿಗೆ ಸಂಬಂಧಿಸಿದ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯನ್ನು ಭೀಕರವಾಗಿ ಅತ್ಯಾಚಾರ ನಡೆಸಿ, ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡನ್ನು ತೂರಿಸಿ, ಹತ್ಯೆ ಯತ್ನ ಮಾಡಲಾಗಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಕೃತ್ಯ ಇದಾಗಿದೆ.
ಈ ಕುರಿತಂತೆ ಪಶ್ಚಿಮ ಬಂಗಾಳ ಪೊಲೀಸರು ಮಾತನಾಡಿದ್ದು, ಮಹಿಳೆಯನ್ನು ಜಲ್ಪೈಗುರಿ ಸಾದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದಿದ್ದಾರೆ.
ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡೋಣ ಎಂದು ಮಹಿಳೆಯನ್ನು ಮನೆಯಿಂದ ಹೊರಕ್ಕೆ ಕರೆಸಿ, ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ಪೊಲೀಸ್ ಅಧಿಕಾರಿಗಳಿಗೆ ಹೇಳಿಕೆ ನೀಡಿದ್ದಾರೆ.
2012ರಲ್ಲಿ ನಡೆದ ನವದೆಹಲಿಯಲ್ಲಿ ನಿರ್ಭಯಾ ಎಂಬ ಯುವತಿಯಲ್ಲಿ ಚಲಿಸುವ ಬಸ್ನಲ್ಲಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿ, ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತೂರಿಸಿ ಹತ್ಯೆ ಯತ್ನ ಮಾಡಲಾಗಿತ್ತು. ಹಲವು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿದ ಆಕೆ, ಕೊನೆಯುಸಿಳೆದಿದ್ದಳು. ಈಗ ಇಂತಹುದ್ದೇ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
Discussion about this post