ಕಲ್ಪ ಮೀಡಿಯಾ ಹೌಸ್ | ಪಾಟ್ನಾ |
ಮಹತ್ವದ ಬೆಳವಣಿಗೆಯಲ್ಲಿ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ #NitishKumar ರಾಜೀನಾಮೆ ನೀಡಿದ್ದು, ಈ ಮೂಲಕ ಆರ್’ಜೆಡಿಯೊಂದಿಗಿನ ಮೈತ್ರಿಯನ್ನು ಕಡಿದುಕೊಂಡಿದೆ.
ರಾಜಭವನಕ್ಕೆ ತೆರಳಿದ ನಿತೀಶ್ ಕುಮಾರ್ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದು, ಎನ್’ಡಿಎ #NDA ಸೇರುವುದು ಬಹುತೇಕ ನಿಶ್ಚಿತವಾಗಿದೆ.
ಎಲ್ಲಾ ಪಕ್ಷಗಳು ನಿರ್ಣಾಯಕ ಸಭೆಯ ನಂತರ ನಿತೀಶ್, ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಬಿಜೆಪಿ ಜೊತೆ ನಿತೀಶ್ ಕುಮಾರ್ ಸರ್ಕಾರ ರಚನೆ ಬಹುತೇಕ ಫಿಕ್ಸ್ ಆಗಿದ್ದು, ಇಂದು ಸಂಜೆ ಅಥವಾ ಸೋಮವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇನ್ನೊಂದೆಡೆ ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವೀಕ್ಷಕರನ್ನು ನೇಮಕ ಮಾಡಿದೆ. ಭೂಪೇಶ್ ಬಘೇಲ್ ಅವರನ್ನು ವೀಕ್ಷಕನನ್ನಾಗಿ ನೇಮಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















