ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಯಾವುದೇ ಶಾಲಾ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲುಗಳನ್ನು ಧಿರಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಈ ಕುರಿತಂತೆ ಇಂದು ತೀರ್ಪು ಪ್ರಕಟಿಸಿದ ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ಸರ್ಕಾರದ ಆದೇಶ ವಿವೇಚನಾರಹಿತವಾದುದು ಎಂಬ ವಾದವಿದೆ. ಹಿಜಾಬ್ ಧಾರ್ಮಿಕ ಸ್ವಾತಂತ್ರದ ಹಕ್ಕು ಎಂಬ ವಾದವೂ ಸಹ ಇದೆ. ಆದರೆ, ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದು ನ್ಯಾಯಾಲಯ ಹೇಳಿದೆ.
ರಾಜ್ಯ ಸರ್ಕಾರ ಜಾರಿಗೊಳಿಸುವ ಸಮವಸ್ತ್ರ ಕಡ್ಡಾಯವನ್ನು ವಿದ್ಯಾರ್ಥಿಗಳು ವಿರೋಧಿಸುವಂತಿಲ್ಲ ಎಂದಿರುವ ನ್ಯಾಯಪೀಠ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post