ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯದಾದ್ಯಂತ ಈ ಬಾರಿ ಬಕ್ರೀದ್ ಹಬ್ಬದ ಸಾಮೂಹಿಕ ಪ್ರಾರ್ಥನೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದ್ದು, ರಾಜ್ಯದ ಯಾವುದೇ ಭಾಗದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ ಎಂದು ಆದೇಶಿಸಿದೆ.
ಈ ಕುರಿತಂತೆ ಕೋವಿಡ್ 19 ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ 2020ನೇ ಬಕ್ರೀದ್ ಹಬ್ಬ ಆಚರಿಸುವ ಕುರಿತು ಕರ್ನಾಟಕ ಸರ್ಕಾರ ತನ್ನ ನಡಾವಳಿಯನ್ನು ಬಿಡುಗಡೆ ಮಾಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ, ಭಾರತ ಸರ್ಕಾರ ಇವರ ಅಧಿಕೃತ ಜ್ಞಾಪನ ಸಂಖ್ಯೆ ಅನುಸಾರ ಈಗಾಗಲೇ ಕರ್ನಾಟಕ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.
ರಾಜ್ಯದಾದ್ಯಂತ ಕೆಲವು ಜಿಲ್ಲೆಗಳಲ್ಲಿ ಜುಲೈ 31 ಹಾಗೂ ಉಳಿದ ಜಿಲ್ಲೆಗಳಲ್ಲಿ ಆಗಸ್ಟ್ 1ರಂದ ಬಕ್ರೀದ್ ಆಚರಿಸಲಾಗುತ್ತದೆ. ಆದೆರ, ಈ ವೇಳೆ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ನಮಾಜ್ ಮಾಡುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ಹಬ್ಬದ ದಿನ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಲು ಇಚ್ಚಿಸುವಂತಹ ಮಸೀದಿಗಳ ಆಡಳಿತ ಸಮಿತಿಗಳು ಜೂನ್ 6ರಂದು ಈಗಾಗಲೇ ಹೊರಡಿರುವ ಆದೇಶದ ಅನ್ವಯ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಇದರನ್ವ ಮಸೀದಿಗಳಲ್ಲಿ ಮಾತ್ರ 50 ಜನಕ್ಕೆ ಮೀರದಂತೆ ಪ್ರಾರ್ಥನೆ ಸಲ್ಲಿಸಬಹುದು. ಒಂದು ವೇಳೆ 50ಕ್ಕಿಂತಲೂ ಅಧಿಕ ಮಂದಿಯಿದ್ದರೆ ಬ್ಯಾಚ್’ಗಳಲ್ಲಿ ಮಸೀದಿಗಳಲ್ಲೇ ಪ್ರಾರ್ಥನೆ ಮಾಡಬಹುದು. ಬದಲಾಗಿ, ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇನ್ನು, ಪ್ರಾರ್ಥನೆ ಸ್ಥಳದಲ್ಲಿ ಮಾಸ್ಕ್ ಧರಿಸುವುದ ಕಡ್ಡಾಯವಾಗಿದ್ದು, 60 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಮಾಡುವುದು. ನಮಾಜ್ ನಿರ್ವಹಿಸುವ ಮಧ್ಯ ಕನಿಷ್ಠ ಆರು ಅಡಿ ಅಂತರ ಕಾಯ್ದುಕೊಳ್ಳುವುದು, ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡುವುದು, ಕೈಗಳನ್ನು ಸೋಪಿನಿಂದ ಶುಚಿಗೊಳಿಸುವುದು ಹಾಗೂ ಧರ್ಮಗ್ರಂಥಗಳನ್ನು ಮುಟ್ಟುವಂತಿಲ್ಲ ಎಂದು ಸೂಚಿಸಲಾಗಿದೆ.
Get In Touch With Us info@kalpa.news Whatsapp: 9481252093

















