ಕಲ್ಪ ಮೀಡಿಯಾ ಹೌಸ್
ಚಿತ್ರದುರ್ಗ: ನಾನು ಸಿಡಿ ಮಹಿಳೆಗೆ ಯಾವುದೇ ಹಣ ವರ್ಗಾವಣೆ ಮಾಡಿಲ್ಲ. ಇದು ಸತ್ಯಕ್ಕೆ ದೂರವಾದದ್ದು ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಡಿ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದ ಹಿನ್ನಲೆಯಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ನನಗೆ ಭಯ ಇದ್ದಿದ್ದರೆ ಮೊದಲೇ ಇಂಜಕ್ಷನ್ ಆರ್ಡರ್ ತೆಗೆದುಕೊಳ್ಳುತ್ತಿದ್ದೆ. ನನ್ನ ಹೆಸರು ಪ್ರಕರಣದಲ್ಲಿ ತಳುಕು ಹಾಕಿಕೊಂಡಿದ್ದು ಕೇಳಿ ಆಶ್ಚರ್ಯವಾಗಿದೆ ಎಂದು ಹೇಳಿದ್ದಾರೆ.
ಎಸ್’ಐಟಿ ತನಿಖಾಧಿಕಾರಿಗಳು ನನ್ನನ್ನು ಕರೆದರೆ ನಾನು ಉತ್ತರಿಸುತ್ತೇನೆ. ಒಬ್ಬ ಮಾಜಿ ಸಚಿವನಾಗಿರುವ ನನಗೆ ನಿತ್ಯ ಅನೇಕರು ಕರೆ ಮಾಡುತ್ತಿರುತ್ತಾರೆ. ಹಾಗಂತ ಸಿಡಿ ಮಹಿಳೆಗೂ ನನಗೂ ಯಾವುದೇ ಸಂಪರ್ಕ ಇಲ್ಲ ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ, ರಮೇಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಲ್ಲರೂ ನನಗೆ ಪರಮಾಪ್ತರು. ನನಗೆ ರಾಜಕೀಯದಲ್ಲಿ ವಿರೋಧಿಗಳಿಲ್ಲ. ಈ ಪ್ರಕರಣದಲ್ಲಿ ನನ್ನ ಹೆಸರು ಏಕೆ ಬಂದಿತೆಂದು ಈವರೆಗೂ ತಿಳಿಯುತ್ತಿಲ್ಲ ಎಂದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















