ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಳೆದ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ನೀಡಿದ್ದ 10 ಕೆಜಿ ಅಕ್ಕಿ ಕೊಡುವ ವಿಚಾರ ಹಲವು ವಿವಾದಗಳನ್ನು ಸೃಷ್ಠಿಸಿತ್ತು. ಆದರೆ, ಈಗ 10 ಕೆಜಿ ಅಕ್ಕಿ ಬದಲಿಗೆ ಅದರ ಲೆಕ್ಕದಲ್ಲಿ ಆಹಾರ ಧಾನ್ಯಗಳನ್ನು ಕೊಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್’ಗಳಿಗೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲಿಗೆ ಆಹಾರ ಧಾನ್ಯ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ.
ಇಂದಿರಾ ಆಹಾರ ಕಿಟ್ ಹೆಸರಿನಲ್ಲಿ ಆಹಾರ ಧಾನ್ಯಗಳನ್ನು ಕೊಡಲು ಮುಂದಾಗಿರುವ ರಾಜ್ಯ ಸರ್ಕಾರ, ಇಂದಿರಾ – ಅನ್ನಭಾಗ್ಯ ಫಲಾನುಭವಿಗಳನ್ನು ಪುನರುಜ್ಜೀವನಗೊಳಿಸಲು ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮ ಕಿಟ್ ನೀಡಲು ಸರ್ಕಾರ ನಿರ್ಧರಿಸಿದೆ.
ಏನೆಲ್ಲಾ ಸಿಗಲಿದೆ ಆಹಾರ ಕಿಟ್’ನಲ್ಲಿ?
ಇಂದಿರಾ ಆಹಾರ ಕಿಟ್’ನಲ್ಲಿ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಬದಲಿಗೆ 5 ಕೆಜಿ ಅಕ್ಕಿ ನೀಡಲಾಗುತ್ತದೆ.
ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ತೊಗರಿ ಬೇಳೆ, ಹೆಸರು ಕಾಳು, ಸಕ್ಕರೆ, ಉಪ್ಪು ತಲಾ 1 ಕೆಜಿ ಹಾಗೂ 1 ಲೀಟರ್ ಅಡುಗೆ ಎಣ್ಣೆ ಪದಾರ್ಥವನ್ನು ನೀಡಲಾಗುತ್ತದೆ.
ಈ ಕುರಿತಂತೆ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್, ಅನ್ನಭಾಗ್ಯದ ಅಕ್ಕಿ ದುರ್ಬಳಕೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಅಕ್ಕದಾಗಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ.ಗಳಲ್ಲಿ 6,119.52 ಕೋಟಿ ರೂ. ವಚ್ಚದಲ್ಲಿ ಇಂದಿರಾ ಆಹಾರ ಕಿಟ್ ಅನ್ನು ಒದಗಿಸಲು ಬಜೆಟ್ ಮರುಹಂಚಿಕೆ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post