ಶಿವಮೊಗ್ಗ: ಎಸ್‌ಸಿ ಎಸ್‌ಟಿ ನೌಕರರಿಗೆ ಬಡ್ತಿ ಮೀಸಲಾತಿ ವಿಚಾರದಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಎಂದಿಗೂ ನಿಮ್ಮ ಪರವಾಗಿದೆ ಎಂದು ಸಹಕಾರ ಸಚಿವ ಬಂಡಪ್ಪ ಖಾಶೆಂಪುರ ಭರವಸೆ ನೀಡಿದರು.
ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ನೌಕರರಿಗೆ ಬಡ್ತಿ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗದಲ್ಲಿ ಧರಣಿ ನಡೆಸುತ್ತಿದ್ದ ನೌಕರರನ್ನು ಭೇಟಿಯಾಗಿ, ಮನವಿ ಸ್ವೀಕರಿಸಿ ಮಾತನಾಡಿದರು.
ಬಡ್ತಿ ಮೀಸಲಾತಿಗಾಗಿ ನೌಕರರು ಆತಂಕ ಪಡುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಎಂದಿಗೂ ನಿಮ್ಮ ಪರವಾಗಿಯೇ ಇದೆ ಎಂದು ಭರವಸೆ ನೀಡಿದರು.
ಇದೇ ವೇಳೆ ಎನ್‌ಇಎಸ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ 65ನೆಯ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಕಾಲ್ನಡಿಗೆ ಮೂಲಕ ಹೆಜ್ಜೆ ಹಾಕಿ ಸಚಿವರು ಗಮನ ಸೆಳೆದರು.
Discussion about this post