ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಾರಕವಾಗಿ ಕಾಡುತ್ತಿರುವ ಕೊರೋನಾ ವೈರಸ್ ಕುರಿತಾಗಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಬದಲಾಗಿ, ಆರೋಗ್ಯ ಇಲಾಖೆ ನೀಡಿರುವ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಎಂದು ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಕರೆ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಜನಸಾಮಾನ್ಯರು ಭಯ ಪಡುವ ಅವಶ್ಯಕತೆ ಇಲ್ಲ. ನಿಮಗೆ ಆರೋಗ್ಯ ಸರಿ ಇಲ್ಲ ಎಂದೆನಿಸಿದರೆ, ಆರೋಗ್ಯ ಅಧಿಕಾರಿಗಳನ್ನು ಸಂಪರ್ಕಿಸಿ. ನಿಮ್ಮನ್ನು ರಕ್ಷಿಸಿಕೊಳ್ಳಿ ಕರೋನಾ ವೈರಸ್’ನಿಂದ ಸುರಕ್ಷಿತವಾಗಿರಿ. ಆರೋಗ್ಯ ಇಲಾಖೆ ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಲ್ಲರೂ ಒಟ್ಟಾಗಿ ಕರೋನಾ ವೈರಸ್ ವಿರುದ್ಧ ಹೋರಾಡೋಣ ರೋಗ ಹರಡದಂತೆ ನಾವೆಲ್ಲರೂ ಸೇರಿ ಜಾಗ್ರತೆ ವಹಿಸೋಣ, ಜನರು ಭಯ ಪಡುವ ಅವಶ್ಯಕತೆಯಿಲ್ಲ. ಜಾಗೃತವಾಗಿದ್ದರೆ ಅಷ್ಟೇ ಸಾಕು ಎಂದು ಮನವಿ ಮಾಡಿದರು.
Get in Touch With Us info@kalpa.news Whatsapp: 9481252093
Discussion about this post