ನವದೆಹಲಿ: ಉತ್ತರ ಪ್ರದೇಶದ ನೋಯಿಡಾ ಸೆಕ್ಟರ್‌ನಲ್ಲಿ ಖಾಲಿ ಪ್ರದೇಶಗಳಲ್ಲಿ ನಮಾಜ್ ಮಾಡಲು ಅವಕಾಶವನ್ನು ನಿರಾಕರಿಸಿರುವ ಸ್ಥಳೀಯ ಪೊಲೀಸರ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿ ಕಾರಿದ್ದಾರೆ.
ನೋಯ್ಡಾದ ಸೆಕ್ಟರ್ 58ರ ಸಾರ್ವಜನಿಕ ಖಾಲಿ ಸ್ಥಳದಲ್ಲಿ ನಮಾಜು ನಡೆಸುವುದರಿಂದ ಸಾರ್ವಜನಿಕರಿಗೆ ಅಡಚಣೆ ಉಂಟಾಗುತ್ತದೆ ಎಂದು ಪೊಲೀಸರು ಬಹು ರಾಷ್ಟ್ರೀಯ ಕಂಪೆನಿಗಳಿಗೆ ಮತ್ತು ಕೈಗಾರಿಕಾ ಘಟಕಗಳಿಗೆ ನೋಟೀಸ್ ಜಾರಿ ಮಾಡಿ, ತಮ್ಮ ಉದ್ಯೋಗಿಗಳಿಗೆ ಅಲ್ಲಿ ಪ್ರಾರ್ಥನೆ ನಡೆಸುವುದನ್ನು ನಿರ್ಬಂಧಿಸಬೇಕು ಎಂದು ನೋಟೀಸ್ ಜಾರಿ ಮಾಡಿದ್ದರು.
UP Cops literally showered petals for Kanwariyas, but namaz once a week can mean “disrupting peace & harmony”. This is telling Muslims: aap kuch bhi karlo, ghalti to aapki hi hogi.
Also, by law, how does one hold an MNC liable for what their employees do in individual capacity? https://t.co/b90Jw5ZMHY
— Asaduddin Owaisi (@asadowaisi) December 25, 2018
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಓವೈಸಿ, ಯಾರಿಗೂ ತೊಂದರೆಯಾಗದಂತೆ ಖಾಲಿ ಜಾಗದಲ್ಲಿ ನಮಾಜು ಸಲ್ಲಿಸಿದರೆ ಸಾಮರಸ್ಯಕ್ಕೆ ಹೇಗೆ ಧಕ್ಕೆ ಉಂಟಾಗುತ್ತದೆ ಎಂದು ಪ್ರಶ್ನಿಸಿದ್ದು, ಮುಸಲ್ಮಾನರು ಏನೇ ಮಾಡಿದರೂ ತಪ್ಪಾಗುತ್ತದೆ ಎಂಬ ಸಂದೇಶ ಈ ಆದೇಶದಿಂದ ವ್ಯಕ್ತವಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.
Discussion about this post