ಕಲ್ಪ ಮೀಡಿಯಾ ಹೌಸ್ | ನೋಯ್ಡಾ |
ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಮಕ್ಕಳು ಸಾವನ್ನಪ್ಪಿ, ೬ ಜನರಿಗೆ ಗಂಭಿರ ಗಾಯಗಳಾಗಿರುವ ಘಟನೆ ನೋಯ್ಡಾ ಸೆಕ್ಟರ್ 8ರಲ್ಲಿ ಇಂದು ಮುಂಜಾನೆ ನಡೆದಿದೆ.
ಇಲ್ಲಿನ ಕೊಳಗೇರಿಯ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ತಗುಲಿದ ಪರಿಣಾಮ 12 ದಿನದ ನವಜಾತ ಹೆಣ್ಣು ಶಿಶು, 12 ವರ್ಷದ ಬಾಲಕ ತೀವ್ರ ಸುಟ್ಟ ಗಾಯಗಳಿಂದ ಮತೃತಪಟ್ಟಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಲಿಸಲಾಗಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post