ಕಲ್ಪ ಮೀಡಿಯಾ ಹೌಸ್ | ನೋಯ್ಡಾ |
ಇಲ್ಲಿನ ಹೌಸಿಂಗ್ ಸೊಸೈಟಿಯೊಂದರ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿ, ಒಂಬತ್ತು ಮಂದಿಗೆ ತೀವ್ರ ಗಾಯಗಳಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಸೆಕ್ಟರ್ 21ರ ಜಲ ವಿಹಾರದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಸೊಸೈಟಿಯ ಒಂದು ಭಾಗದ ಗೋಡೆ ಕುಸಿದು ಘಟನೆ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯ ನಡೆಸಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯಲ್ಲಿ ಮೃತರಾದವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ವ್ಯಕ್ತಪಡಿಸಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸುವAತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Also read: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮುಖ್ಯಮಂತ್ರಿಗಳ ತಾತ್ವಿಕ ಒಪ್ಪಿಗೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post