ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ಸಿಎಎ ರಾಜ್ಯದಲ್ಲಿ ಜಾರಿಯಾದರೆ ಬೆಂಕಿ ಹಚ್ಚುತ್ತೇನೆ ಎಂದು ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಯು.ಟಿ. ಖಾದರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ. ಸಿಎಎ ಕರ್ನಾಟಕದಲ್ಲಿ ಜಾರಿ ಮಾಡಿದರೆ ತೀವ್ರ ವಿರೋಧ ವ್ಯಕ್ತವಾಗಲಿದೆ ಎಂಬರ್ಥದಲ್ಲಿ ಹೇಳಿದ್ದೇನೆ. ತಪ್ಪಾಗಿ ಅರ್ಥೈಸಿಕೊಂಡು ಕಾಲಹರಣ ಮಾಡುವ ಬದಲು ಇತರ ಕೆಲಸದತ್ತ ಗಮನ ಕೊಡಿ ಎಂದಿದ್ದಾರೆ.
ಅಂದಹಾಗೆ ಹೊಸ ಕಾನೂನು ಹುಟ್ಟು ಹಾಕಿ ಉತ್ತರದ ರಾಜ್ಯಗಳಿಗೆ ಬೆಂಕಿ ಇಟ್ಟಿದ್ದೀರ. ಇದರ ನಡುವೆ ಆರ್ಥಿಕತೆ ಕುಸಿತದ ಕಥೆ ಎಲ್ಲಿಗೆ ಬಂತು? ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಾನೂನು ಜಾರಿ ಮಾಡುತ್ತಿದೆ ಕೇಂದ್ರ ಸರಕಾರ ಎಂದಿದ್ದಾರೆ.
Get in Touch With Us info@kalpa.news Whatsapp: 9481252093







Discussion about this post