ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನೀಡಲಾಗುತ್ತಿದ್ದ ಕೋವಿಡ್ ಲಸಿಕಾ ಕೇಂದ್ರವನ್ನು ಮೇ 11ರಿಂದ ಜಾರಿಗೆ ಬರುವಂತೆ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಶಾಲೆಗೆ ಸ್ಥಳಾಂತರಿಸಲಾಗಿದೆ.
ತಾಲೂಕು ಸಾರ್ವಜನಿಕ ಆಸ್ಪತ್ರೆಯನ್ನು ಸಂಪೂರ್ಣವಾಗಿ ತೀವ್ರ ರೋಗ ಲಕ್ಷಣಗಳನ್ನು ಹೊಂದಿರುವ ಕೋವಿಡ್ ಸೋಂಕಿತರು ಹಾಗೂ ತುರ್ತು ಚಿಕಿತ್ಸೆಗಳಿಗಾಗಿ ಮಾತ್ರವೇ ಮೀಸಲಿಡಲಾಗಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಲಸಿಕಾ ಕೇಂದ್ರವನ್ನು ಸ್ಥಳಾಂತರ ಮಾಡಲಾಗಿದೆ.
ಸಂಚಿಯ ಹೊನ್ನಮ್ಮ ಶಾಲೆಗೆ ಸ್ಥಳಾಂತರಿಸಿರುವ ಲಸಿಕಾ ಕೇಂದ್ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೂ ತೆರೆದಿರುತ್ತದೆ.
ಇನ್ನು, ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಈವರೆಗೂ ನೀಡಲಾಗುತ್ತಿದ್ದ ಸಾಮಾನ್ಯ ಚಿಕಿತ್ಸೆ/ಹೊರ ರೋಗಿಗಳ ವಿಭಾಗವನ್ನು ವಿಐಎಸ್’ಎಲ್ ಆಸ್ಪತ್ರೆಗೆ ಮೇ 12ರಿಂದ ಜಾರಿಗೆ ಬರುವಂತೆ ಸ್ಥಳಾಂತರಿಸಲಾಗಿದೆ.
ಅಪಘಾತ, ವಿಷಪ್ರಾಷನ, ಹಾವು ಕಡಿತ, ನಾಯಿ ಕಡಿತ ಸೇರಿದಂತೆ ತುರ್ತು ಚಿಕಿತ್ಸೆ ಹಾಗೂ ಶವ ಪರೀಕ್ಷೆ ಮಾತ್ರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post