ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್’ನಲ್ಲಿ ಮೇಲ್ಸೇತುವೆ ಕಾಮಗಾರಿ ಆರಂಭವಾಗಿರುವ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಪರ್ಯಾಯ ಮಾರ್ಗ ಸೂಚಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದು, ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.34ರಲ್ಲಿ ರೈಲ್ವೆ ಮೇಲ್ಸೇತುವೆ(ಆರ್‌ಓಬಿ) ಕಾಮಗಾರಿ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ-ಭದ್ರಾವತಿ ನಡುವೆ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ನೀಡಿರುವ ವರದಿಯನ್ವಯ ತಾತ್ಕಾಲಿಕವಾಗಿ ಪರ್ಯಾಯ ಮಾರ್ಗಗಳಲ್ಲಿ ವಾಹನಗಳು ಸಂಚರಿಸಲು ಸೂಚಿಸಲಾಗಿದೆ.
ಪರ್ಯಾಯ ಮಾರ್ಗ ಹೀಗಿದೆ: ದ್ವಿಚಕ್ರ ವಾಹನಗಳು ಹೊರತುಪಡಿಸಿ ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ವಾಹನಗಳು ಬಿಳಕಿ ಕ್ರಾಸ್, ಕೃಷ್ಣಪ್ಪ ವೃತ್ತದ ಮೂಲಕ ಭದ್ರಾವತಿ ತಲುಪಬೇಕು.
ಭದ್ರಾವತಿಯಿಂದ ಶಿವಮೊಗ್ಗ ಕಡೆಗೆ ಸಂಚರಿಸುವ ವಾಹನಗಳು ಅಂಡರ್ ಬ್ರಿಡ್ಜ್, ಉಂಬ್ಳೆಬೈಲ್ ರಸ್ತೆ, ಕೃಷ್ಣಪ್ಪ ವೃತ್ತ, ರಾಷ್ಟ್ರೀಯ ಹೆದ್ದಾರಿ 69ರ ಮೂಲಕ ಶಿವಮೊಗ್ಗ ತಲುಪಬೇಕು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post