ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ/ತಿಪಟೂರು |
ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿ-ರಾಮೇಶ್ವರಂ #Rameshwaram ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲುಗಳಿಗೆ ತಿಪಟೂರು #Tiptur ನಿಲ್ದಾಣದಲ್ಲಿ ಮೂರು ಟ್ರಿಪ್’ಗಳಿಗೆ ಹೆಚ್ಚುವರಿ ತಾತ್ಕಾಲಿಕ ನಿಲುಗಡೆ ನೀಡಲಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ #SWR ಪ್ರಕಟಣೆ ಹೊರಡಿಸಿದ್ದು, ಶ್ರೀ ಸಿದ್ಧಾರೂಢ ಸ್ವಾಮಿಜಿ ಹುಬ್ಬಳ್ಳಿ-ರಾಮೇಶ್ವರಂ ನಿಲ್ದಾಣಗಳ ನಡುವೆ ಚಲಿಸುವ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 07355/07356) ರೈಲುಗಳಿಗೆ ತಿಪಟೂರು ನಿಲ್ದಾಣದಲ್ಲಿ ಮೂರು ಟ್ರಿಪ್’ಗಳಿಗೆ ಹೆಚ್ಚುವರಿ ತಾತ್ಕಾಲಿಕ ನಿಲುಗಡೆ ಒದಗಿಸಲಾಗುತ್ತಿದೆ.
ಎಂದೆಂದು ನಿಲುಗಡೆ?
ಡಿ.14, 21 ಮತ್ತು 28, 2024 ರಂದು ಹುಬ್ಬಳ್ಳಿಯಿಂದ #Hubli ಹೊರಡುವ ರೈಲು ಸಂಖ್ಯೆ 07355 ಎಸ್’ಎಸ್’ಎಸ್ ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲು ತಿಪಟೂರು ನಿಲ್ದಾಣಕ್ಕೆ ಬೆಳಗ್ಗೆ 11:43 ಗಂಟೆಗೆ ಆಗಮಿಸಿ, 11:45 ಕ್ಕೆ ಹೊರಡಲಿದೆ.
ಡಿ.15, 22 ಮತ್ತು 29, 2024 ರಂದು ರಾಮೇಶ್ವರಂ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 07356 ರಾಮೇಶ್ವರಂ-ಎಸ್’ಎಸ್’ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲು ತಿಪಟೂರು ನಿಲ್ದಾಣಕ್ಕೆ ಮಧ್ಯಾಹ್ನ 12:58 ಗಂಟೆಗೆ ಆಗಮಿಸಿ, 1:00 ಗಂಟೆಗೆ ನಿರ್ಗಮಿಸಲಿದೆ.
ರೈಲು ಸಂಖ್ಯೆ 07355 ಅನ್ನು ಡಿ.28, 2024 ರವರೆಗೆ ಮತ್ತು ರೈಲು ಸಂಖ್ಯೆ 07356 ಅನ್ನು ಡಿ.29, 2024 ರವರೆಗೆ ಓಡಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post