ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ದಕ್ಷಿಣ ಕನ್ನಡ |
ರಾಜ್ಯ ರಾಜಧಾನಿ ಬೆಂಗಳೂರು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಕೇಂದ್ರ ಹವಾಮಾನ ಇಲಾಖೆಯ ವರದಿಯಂತೆ ನ.24ರವರೆಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.
ದಕ್ಷಿಣ ಕರ್ನಾಟಕ ಜಿಲ್ಲೆಗಳಾದ ಮಂಡ್ಯ, ರಾಮನಗರ, ಮೈಸೂರು, ತುಮಕೂರು, ಉತ್ತರ ಕರ್ನಾಟಕದ ಜಿಲ್ಲೆಗಳಾದ ವಿಜಯಪುರ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಡಿಮೆ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಇಂದು ಕನಿಷ್ಠ 13.9 ಡಿಗ್ರಿ ಸೆಲ್ಷೀಯಸ್ ತಾಪಮಾನ ದಾಖಲಾಗಿದೆ. ಇದು ಕಳೆದ ಒಂದು ದಶಕದಲ್ಲಿ ಬೆಂಗಳೂರಿನಲ್ಲಿ ದಾಖಲಾದ ಕನಿಷ್ಠ ತಾಪಮಾನ ಎಂದು ವರದಿಯಾಗಿದೆ.
ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ಒಂದು ವಾರದಿಂದ ಚಳಿಯ ವಾತಾವರಣವಿದೆ. ಆದರೆ, ಭಾರಿ ಮಳೆಯಿಂದಾಗಿ ನಗರದಲ್ಲಿ ಜನಜೀವನ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post